ಜವಾಬ್ದಾರಿ ಅರಿತರೆ ಜೀವನದಲ್ಲಿ ಯಶಸ್ಸು

CTD 2 SRS--0003
Published on

ಚಿತ್ರದುರ್ಗ: ಪರಿಶ್ರಮದಿಂದ ಜೀವನದಲ್ಲಿ ಯಶಸ್ಸುಗಳಿಸಲು ಸಾಧ್ಯ ಎಂದು ಶ್ರೀ ಮಾದಾರ ಚನ್ನಯ್ಯ ಗುರುಪೀಠದ ಶ್ರೀ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಹೇಳಿದರು.
ನಗರದ ಎಸ್‌ಆರ್‌ಎಸ್ ಹೆರಿಟೇಜ್ ಶಾಲೆಯಲ್ಲಿ ಮಂಗಳವಾರ ಆಯೋಜಿಸಿದ್ದ ಕಲ್ಪಿತ ಸಂಸತ್ ಪ್ರತಿನಿಧಿಗಳ ಪ್ರತಿಜ್ಞಾವಿಧಿ ಸ್ವೀಕಾರ ಹಾಗೂ ಪದಗ್ರಹಣ ಕಾರ್ಯಕ್ರಮದ ಸಾನ್ನಿಧ್ಯವಹಿಸಿ ಮಾತನಾಡಿದರು.
ಇಂದಿನ ಶೈಕ್ಷಣಿಕ ಸಂದರ್ಭದಲ್ಲಿ ಪಾಲಕರು, ಶಿಕ್ಷಕರು ಮತ್ತು ವಿದ್ಯಾರ್ಥಿಗಳು ತಮ್ಮ ಹೊಣೆಗಾರಿಕೆ ಅರಿಯಬೇಕಿದೆ. ವಿದ್ಯಾರ್ಥಿಗಳು ಶಿಸ್ತಿನಿಂದ ಅಧ್ಯಯನದಲ್ಲಿ ತೊಡಗುವ, ಮಕ್ಕಳ ವಿದ್ಯಾಭ್ಯಾಸಕ್ಕೆ ಒತ್ತಾಸೆಯಾಗುವ ನಿಲ್ಲುವ ಹೊಣೆಗಾರಿಕೆ ಶಿಕ್ಷಕರು ಮತ್ತು ಪಾಲಕರ ಮೇಲಿದೆ ಎಂದರು.
ಎಸ್‌ಆರ್‌ಎಸ್ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಿ.ಎ. ಲಿಂಗಾರೆಡ್ಡಿ, ಕಾರ್ಯದರ್ಶಿ ಸುಜಾತ ಲಿಂಗಾರೆಡ್ಡಿ, ಆಡಳಿತಾಧಿಕಾರಿ ಡಾ.ಟಿ.ಎಸ್. ರವಿ, ಪ್ರಾಂಶುಪಾಲ ಎಂ.ಎಸ್. ಪ್ರಭಾಕರ್, ಎಂ.ಎಸ್. ಅರ್ಪಿತಾ, ಕೋ-ಆರ್ಡಿನೇಟರ್‌ಗಳಾದ ಶೇಖರ್‌ನಾಯ್ಕ, ಟಿ. ರಾಧಾ, ಬಿ.ವಿ. ರಾಕೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net