ಜಾಕ್ವೆಲ್ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ

ydg02
Published on

ಯಾದಗಿರಿ: ಭೀಮಾ ನದಿಯಿಂದ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಹೊಸ ಜಾಕ್ವೆಲ್ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದು ಜಿ¯್ಲÁ ಉಸ್ತುವಾರಿ ಕಾರ್ಯದರ್ಶಿ ಮನೋಜ್ ಜೈನ್ ಸಂಬAಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಇಲ್ಲಿನ ಜಿಪಂ ಕಚೇರಿಯಲ್ಲಿ ಮಂಗಳವಾರ ಕರೆದಿದ್ದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಭೀಮಾ ನದಿಯಿಂದ ನಗರಕ್ಕೆ ನೀರು ಪೂರೈಸುವ ಜಾಕ್ವೆಲï ಕಾಮಗಾರಿ ಅಮೃತ-೨ ಯೋಜನೆಯಡಿ ಪೂರ್ಣಗೊಳಿಸಲಾಗಿದೆ. ಸದ್ಯ ೭.೫ ಕಿಲೋಮಿಟರ್ ಪೈಪ್‌ಲೈನ್‌ಗಳನ್ನು ಅಳವಡಿಸಬೇಕಾಗಿದ್ದು, ಬಾಕಿ ಉಳಿದಿರುವ ನಾಲ್ಕು ಕಿಲೋಮೀಟರ್ ಪೈಪ್‌ಲೈನ್ ಅಳವಡಿಸುವ ಕಾರ್ಯ ಬರುವ ಡಿಸೆಂಬರ್ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂಬAಧ ಸಂಬAಧ ಎರಡು ಬ್ಯಾಚ್‌ಗಳಲ್ಲಿ ಕಾಮಗಾರಿ ಕೈಗೊಳ್ಳಬೇಕು. ರೈಲ್ವೆ ಕ್ರಾಸಿಂಗ್ ಮತ್ತು ಇತರೆ ಕಾಮಗಾರಿಗಳನ್ನು ಪ್ರತ್ಯೇಕವಾಗಿ ಕೈಗೊಂಡು ಪೈಪ್‌ಲೈನ್ ಅಳವಡಿಸುವ ಕಾರ್ಯ ಶೀಘ್ರ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿ¯್ಲೆಯ ಕೃಷ್ಟಾ ಮೇಲ್ದಂಡೆ ಯೋಜನೆ ಹಾಗೂ ನಾರಾಯಣಪುರ ಜಲಾಶಯ ವ್ಯಾಪ್ತಿಗೆ ಬರುವ ಕಾಲುವೆ ಜಾಲಗಳ ವ್ಯಾಪ್ತಿಯಲ್ಲಿನ ಸರ್ಕಾರದ ಜಮೀನಿನ ಬಗ್ಗೆ ಕ್ಷೇತ್ರ ಮಟ್ಟದಲ್ಲಿ ಅಧಿಕಾರಿಗಳು ಖುz್ದÁಗಿ ಭೇಟಿ ನೀಡಿ ಪರಿಶೀಲಿಸಬೇಕು. ಕಾಲುವೆಗಳ ಮತ್ತು ಕಾಲುವೆಗಳ ಅಕ್ಕ ಪಕ್ಕದ ವ್ಯಾಪ್ತಿಯ ಜಾಗ ಒತ್ತುವರಿ ಸೇರಿದಂತೆ ಸರ್ಕಾರದ ಜಾಗವನ್ನು ಅಧಿಕೃತ ದಾಖಲಾತಿಗಳೊಂದಿಗೆ ಮಾಹಿತಿಯನ್ನು ಇಟ್ಟುಕೊಳ್ಳುವಂತೆ ತಿಳಿಸಿದರು.

ಜಿ¯್ಲÉಯಲ್ಲಿ ಲೋಕೋಪಯೋಗಿ ಇಲಾಖೆ, ನಿರ್ಮಿತಿ ಕೇಂದ್ರ, ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮ ಸೇರಿ ವಿವಿಧ ಏಜೆನ್ಸಿಗಳಿಂದ ಕೈಗೊಳ್ಳಲಾಗುತ್ತಿರುವ ಕಾಮಗಾರಿಗಳು ವಿಶೇಷವಾಗಿ ಹಳೆಯ ಮತ್ತು ಹೊಸ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಪೂರ್ಣಗೊಳಿಸಬೇಕು. ಯಾವುದೇ ಪರಿಸ್ಥಿತಿಯಲ್ಲಿ ಆಯಾ ಕಾಮಗಾರಿಗಳಿಗೆ ನೀಡಿದ ಅನುದಾನ ವಾಪಸ್ ನೀಡದೆ ಸಮರ್ಪಕವಾಗಿ ಬಳಸಿ ಸೂಕ್ತ ಪ್ರಗತಿ ಸಾಧಿಸಬೇಕು ಎಂದು ಎಚ್ಚರಿಕೆ ನೀಡಿದರು.

ಜಿ¯್ಲÁಧಿಕಾರಿ ಡಾ.ಸುಶೀಲಾ ಮಾತನಾಡಿ, ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ಪರಿಹಾರ ನೀಡುವ ಕುರಿತು, ಅತಿವೃಷ್ಟಿಯಿಂದ ಹಾನಿಗೊಳಗಾದ ಮನೆ ಹಾಗೂ ಬೆಳೆ ಹಾನಿ ಕುರಿತು ಅಗತ್ಯ ಮಾಹಿತಿ ನೀಡಿದರು. ಜಿಪಂ ಸಿಇಒ ಗರೀಮಾ ಪನ್ವಾರ್, ಅಪರ ಜಿ¯್ಲÁಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಜಿಪಂ ಉಪ ಕಾರ್ಯದರ್ಶಿ ವಿಜಯಕುಮಾರ ಮಡ್ಡೆ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಸೇರಿದಂತೆ ವಿವಿಧ ಇಲಾಖೆಗಳ ಜಿ¯್ಲÁಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net