ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಜಾನಕಿ ಚಾಲನೆ

bkt-31-6
ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಬಾಗಲಕೋಟೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಶುಕ್ರವಾರ ಚಾಲನೆ ನೀಡಿದರು. ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಬಿ.ರೆಹಮಾನ, ೨ನೇ ಹೆಚ್ಚುವರಿ ಹಿರಿಯ ದಿವಾನಿ ನ್ಯಾಯಾಧೀಶ ಮಹೇಶ ಪಾಟೀಲ, ಅಪರ ಜಿಲ್ಲಾಽಕಾರಿ ಪರಶುರಾಮ ಶಿನ್ನಳಕರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ದಯಾನಂದ ಕರೆನ್ನವರ ಇತರರು ಇದ್ದರು.
Published on

ಬಾಗಲಕೋಟೆ: ವಿಶ್ವ ತಂಬಾಕು ರಹಿತ ದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಜಿಲ್ಲಾಧಿಕಾರಿ ಜಾನಕಿ ಕೆ.ಎಂ ಶುಕ್ರವಾರ ಚಾಲನೆ ನೀಡಿದರು.

ಜಿಲ್ಲಾಡಳಿತ ಭವನದ ಮುಖ್ಯ ಆವರಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಜಿಲ್ಲಾ ಸಮೀಕ್ಷಣಾ ಘಟಕ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಹಾಗೂ ವಿವಿಧ ಇಲಾಖೆ, ಸಂಘ ಸಂಸ್ಥೆಗಳ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.

ಜಾಗೃತಿ ಜಾಥಾ ಜಿಲ್ಲಾಡಳಿತ ಭವನದಿಂದ ಪ್ರಾರಂಭವಾಗಿ ನವನಗರ ಬಸ್ ನಿಲ್ದಾಣ, ಪೊಲೀಸ್ ಪ್ಯಾಲೇಸ್, ಎಲ್.ಐ.ಸಿ ವೃತ್ತದ ಮಾರ್ಗವಾಗಿ ಸಂಚರಿಸಿ ಜಿಲ್ಲಾ ಆಸ್ಪತ್ರೆಗೆ ಮುಕ್ತಾಯವಾಯಿತು. ಜಾಥಾದೂದ್ದಕ್ಕೂ ವಿದ್ಯಾರ್ಥಿಗಳು ತಂಬಾಕಿನಿಂದಾಗುವ ದೃಷ್ಪರಿಣಾಮಗಳ ಜಾಗೃತಿ ಫಲಕಗಳನ್ನು ಪ್ರದರ್ಶಿಸುವದರ ಜೊತೆಗೆ ಘೋಷಣೆಗಳನ್ನು ಕೂಗಿದರು. ಜಾಥಾದಲ್ಲಿ ಪ್ಯಾರಾ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಜಾಥಾ ಪೂರ್ವದಲ್ಲಿ ಜಿಲ್ಲಾಽಕಾರಿ ಜಾನಕಿ ಕೆ.ಎಂ ವಿಶ್ವ ತಂಬಾಕು ರಹಿತ ದಿನದ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಈ ಸಂದರ್ಭದಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ ಜಾಗೃತಿ ಪೋಸ್ಟರಗಳನ್ನು ಬಿಡುಗಡೆ ಮಾಡಲಾಯಿತು.

ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಶಶಿಧರ ಕುರೇರ, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಎಸ್.ಬಿ.ರೆಹಮಾನ, ೨ನೇ ಹೆಚ್ಚುವರಿ ಹಿರಿಯ ದಿವಾನಿ ನ್ಯಾಯಾಧೀಶ ಮಹೇಶ ಪಾಟೀಲ, ಅಪರ ಜಿಲ್ಲಾಽಕಾರಿ ಪರಶುರಾಮ ಶಿನ್ನಳಕರ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ದಯಾನಂದ ಕರೆನ್ನವರ, ಜಿಲ್ಲಾ ಕೃಷ್ಠರೋಗ ನಿಯಂತ್ರಣ ಅಧಿಕಾರಿ ಡಾ.ಶಿವನಗೌಡ ಪಾಟೀಲ, ಜಿಲ್ಲಾ ಮಲೇರಿಯಾ ನಿಯಂತ್ರಣ ಅಧಿಕಾರಿ ಡಾ.ಕುಸುಮಾ ಮಾಗಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಶಶಿಧಕಲಾ ಶಿನ್ನೂರ, ಜಿಲ್ಲಾ ತಂಬಾಕು ಸಲಹೆಗಾರ ಶಶಿಕಾಂತ ಕುಮಠಳ್ಳಿ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net