ಜಾಗೃತಿ ಜಾಥಾಕ್ಕೆ ನ್ಯಾ. ಬಿ.ಅನುಪಮಾ ಲಕ್ಷ್ಮೀ ಚಾಲನೆ

15NGD1
Published on

ನಂಜನಗೂಡು: ವಿಶ್ವ ಬಾಲ ಕಾರ್ಮಿಕ ಪದ್ಧತಿ ವಿರೋಧಿ ದಿನದ ಅಂಗವಾಗಿ ಗುರುವಾರ ವಿದ್ಯಾರ್ಥಿಗಳಿಂದ ಜಾಗೃತಿ ಜಾಥಾ ಜರುಗಿತು.
ನಗರದ ನ್ಯಾಯಾಲಯ ಸಂಕೀರ್ಣ ಆವರಣದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ಅನುಪಮಾ ಲಕ್ಷ್ಮೀ ಚಾಲನೆ ಕೊಟ್ಟರು. ನಂತರ ವಿದ್ಯಾರ್ಥಿಗಳ ಭಿತ್ತಿಫಲಕಗಳನ್ನು ಹಿಡಿದು ಜಾಥಾ ನಡೆಸುವ ಮೂಲಕ ಗಮನ ಸೆಳೆದರು.


ಈ ಸಂದರ್ಭದಲ್ಲಿ ಮಾತನಾಡಿದ ಒಂದನೇ ಅಪರ ಸಿವಿಲ್ ನ್ಯಾಯಾಧೀಶ ಎಂ.ಕಿಶೋರ್‌ಕುಮಾರ್, ವಿಶ್ವ ಕಾರ್ಮಿಕ ಸಂಸ್ಥೆಯ ವರದಿಯ ಪ್ರಕಾರ ಜಗತ್ತಿನಲ್ಲಿ 160 ಮಿಲಿಯನ್ ಬಾಲ ಕಾರ್ಮಿಕರಿದ್ದಾರೆ. ಅಂದರೆ ಪ್ರತಿ 10 ಮಕ್ಕಳಲ್ಲಿ ಒಂದು ಮಗು ಬಾಲ ಕಾರ್ಮಿಕನಾಗಿರುತ್ತಾನೆ. ಈ ಬಾಲಕಾರ್ಮಿಕ ಪದ್ಧತಿಯಿಂದ ಮಕ್ಕಳನ್ನು ಹೊರತರಬೇಕಾದರೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅನುಷ್ಠಾನಗೊಳ್ಳಬೇಕು. ಆ ಮೂಲಕ ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡಬೇಕಾಗಿದೆ ಎಂದರು.

ಪ್ರಧಾನ ಸಿವಿಲ್ ನ್ಯಾಯಾಧೀಶ ಎನ್.ಎಸ್.ರಘುರಾಮ, ಅಪರ ಸರ್ಕಾರಿ ವಕೀಲ ಬಿ.ನಂಜುಂಡಸ್ವಾಮಿ(ಬೊಮ್ಮಾಯಿ), ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಕೆ.ಜಿ.ಮಹೇಶ್, ವಕೀಲರು ಇದ್ದರು.

ಚಿ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net