ಜಾತಿ, ಉಪಜಾತಿ ಕಾಲಂನಲ್ಲಿ ಒಕ್ಕಲಿಗ ಎಂದೇ ನಮೂದಿಸಿ

22 HANUR 3
Published on

ಹನೂರು: ಸರ್ಕಾರ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಜಾತಿ ಮತ್ತು ಉಪಜಾತಿ ಕಾಲಂನಲ್ಲಿ ಪ್ರತಿಯೊಬ್ಬರೂ ಒಕ್ಕಲಿಗ ಎಂದೇ ನಮೂದಿಸಬೇಕು ಎಂದು ಸಮುದಾಯದ ಮುಖಂಡ ವೆಂಕಟೇಗೌಡ ತಿಳಿಸಿದರು.

ಪಟ್ಟಣದ ಶ್ರೀ ಬೆಟ್ಟಳ್ಳಿ ಮಾರಮ್ಮನ ದೇಗುಲದ ಆವರಣದಲ್ಲಿ ಭಾನುವಾರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಸಂಬಂಧ ಆಯೋಜಿಸಿದ್ದ ಸಮುದಾಯದ ಮುಖಂಡರ ಸಭೆಯಲ್ಲಿ ಮಾತನಾಡಿದರು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ, ವಿವಿಧ ಶಾಖಾ ಮಠದ ಶ್ರೀಗಳು ಹಾಗೂ ಹಿರಿಯ ಮುಖಂಡರು ಸಮೀಕ್ಷೆ ಸಂಬಂಧ ಸಭೆ ನಡೆಸಿ ಸಮುದಾಯದ ಜನತೆಯಲ್ಲಿ ಅರಿವು ಮೂಡಿಸಿದ್ದಾರೆ. ಆದ್ದರಿಂದ ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗ ಸೆ.22 ರಿಂದ ಅ.7ರವರೆಗೆ ರಾಜ್ಯಾದ್ಯಂತ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಜಾತಿ ಮತ್ತು ಉಪ ಜಾತಿ ಕಾಲಂನಲ್ಲಿ ಒಕ್ಕಲಿಗ ಎಂದೇ ನಮೂದಿಸಬೇಕು. ಇದರಿಂದ ಮುಂದಿನ ದಿನಗಳಲ್ಲಿ ಸಮುದಾಯಕ್ಕೆ ಮೀಸಲಾತಿ ಸೌಕರ್ಯ ಸಿಗಲಿದೆ. ಈ ಬಗ್ಗೆ ಪ್ರತಿಯೊಬ್ಬರೂ ಮನದಟ್ಟು ಮಾಡಿಕೊಂಡು ಸಮೀಕ್ಷೆಯಲ್ಲಿ ನಿಖರ ಮಾಹಿತಿ ನೀಡಬೇಕು ಎಂದು ತಿಳಿಸಿದರು.

ಹಿರಿಯ ಮುಖಂಡ ಲಿಂಗರಾಜು ಮಾತನಾಡಿ, ಸಮುದಾಯದಲ್ಲಿ ಎಲ್ಲ ವರ್ಗದ ಜನರಿದ್ದಾರೆ. ಹಾಗಾಗಿ ಸಮುದಾಯದ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ಸಿಗಬೇಕಾದರೆ ಸಮೀಕ್ಷೆಯಲ್ಲಿ ಒಕ್ಕಲಿಗ ಎಂದು ನಮೂದಿಸುವುದು ಅತ್ಯಗತ್ಯ ಎಂದರು. ಪಪಂ ಉಪಾಧ್ಯಕ್ಷ ಆನಂದ್‌ಕುಮಾರ್, ಸದಸ್ಯರಾದ ಗಿರೀಶ್, ಮಹಾದೇಶ್, ಮುಖಂಡರಾದ ಶಿವರಾಮೇಗೌಡ, ಲಿಂಗೇಗೌಡ, ಶ್ರೀನಿವಾಸ್, ರಾಜುಗೌಡ, ಪ್ರಕಾಶ್, ಶಂಕರೇಗೌಡ, ತಮ್ಮಯ್ಯಗೌಡ, ಸಿದ್ದೇಗೌಡ, ಮಾದೇಶ್, ನಾಗೇಂದ್ರ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net