ಜಾತಿ ಕಲಂನಲ್ಲಿ ಉಪ್ಪಾರ ಎಂದೇ ನಮೂದಿಸಿ

Published on

ಯಳಂದೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಸೆ.22 ರಿಂದ ಅ.9 ರವರಗೆ ನಡೆಸಲಿರುವ ಜಾತಿ ಜನಗಣತಿಯಲ್ಲಿ ಉಪ್ಪಾರ ಸಮಾಜದವರು ಜಾತಿ ಕಲಂನಲ್ಲಿ ಉಪ್ಪಾರ ಎಂದೇ ನಮೂದಿಸಬೇಕು ಎಂದು ಕರ್ನಾಟಕ ರಾಜ್ಯ ಉಪ್ಪಾರ ಸಂಘದ ಕಾರ್ಯದರ್ಶಿ ಕಂದಹಳ್ಳಿ ನಂಜುಂಡಸ್ವಾಮಿ ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಸುಮಾರು 20 ರಿಂದ 25 ಲಕ್ಷ ಜನಸಂಖ್ಯೆ ಇರುವ ಪ್ರವರ್ಗ-1 ರಡಿಯಲ್ಲಿ ಬರುವ ಉಪ್ಪಾರ ಸಮಾಜದವರು ನಿಖರವಾದ ಮಾಹಿತಿ ನೀಡುವ ಮೂಲಕ ಸಮೀಕ್ಷೆಯಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು. ಸಮೀಕ್ಷೆಯ 9ನೇ ಕಾಲಂನಲ್ಲಿ ಜಾತಿಯ ಹೆಸರು ಕೇಳಿದಾಗ ಉಪ್ಪಾರ ಎಂದು ಮಾತ್ರ ನಮೂದಿಸಬೇಕು. ಉಪ್ಪಾರ ಸಮಾಜವನ್ನು ಪರಿಶಿಷ್ಟ ಪಂಗಡ (ಎಸ್‌ಟಿ) ಸಮುದಾಯಕ್ಕೆ ಸೇರಿಸುವ ನಿಟ್ಟಿನಲ್ಲಿ ಈಗಾಗಲೇ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ. ಸಚಿವ ಸಂಪುಟದಲ್ಲಿ ಈ ವಿಷಯವನ್ನು ಇಟ್ಟು ಕೇಂದ್ರ ಸರ್ಕಾರಕ್ಕೆ ಕಳುಹಿಸುವ ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

23 ವೈಎಲ್‌ಡಿ ಚಿತ್ರ 01 ಕಂದಹಳ್ಳಿ ನಂಜುಂಡಸ್ವಾಮಿ, ಕಾರ್ಯದರ್ಶಿ, ಕರ್ನಾಟಕ ರಾಜ್ಯ ಉಪ್ಪಾರ ಸಂಘ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net