

ಚಿತ್ರದುರ್ಗ: ಸುಪ್ರೀಂಕೋರ್ಟ್ ತೀರ್ಪಿನಂತೆ ಪರಿಶಿಷ್ಟ ಜಾತಿಯ 101 ಉಪ ಜಾತಿಗಳಿಗೆ ಒಳ ಮೀಸಲು ಕಲ್ಪಿಸುವುದಕ್ಕಾಗಿ ರಾಜ್ಯ ಸರ್ಕಾರ ಜಾತಿ ಗಣತಿ ಆರಂಭಿಸಿದ್ದು, ಕಡ್ಡಾಯವಾಗಿ ಛಲವಾದಿ ಎಂದು ಬರೆಸುವಂತೆ ಛಲವಾದಿ ಮಹಾಸಭಾ ಮಾಜಿ ಜಿಲ್ಲಾಧ್ಯಕ್ಷ ಎಚ್.ಅಣ್ಣಪ್ಪಸ್ವಾಮಿ ಮನವಿ ಮಾಡಿದ್ದಾರೆ.
ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ರಾಜಕೀಯವಾಗಿ ವಂಚನೆಗೊಳಗಾಗಿರುವ ಪರಿಶಿಷ್ಟ ಜಾತಿಯಲ್ಲಿನ ಉಪ ಜಾತಿಗಳು ಆಯಾ ಜನಸಂಖ್ಯೆಗೆ ಅನುಗುಣವಾಗಿ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆಯಬೇಕಾಗಿರುವುದರಿಂದ ಗಣತಿದಾರರು ಮನೆ ಬಾಗಿಲಿಗೆ ಬಂದಾಗ ಛಲವಾದಿ ಎಂದು ನಮೂದಿಸುವಂತೆ ಕೋರಿದ್ದಾರೆ.