ಜಾತಿ ವ್ಯವಸ್ಥೆ ವಿರುದ್ಧ ಸಮರ ಸಾರಿದ ಸಂತ

13Kush01
Published on

ಕುಶಾಲನಗರ: ಕುಶಾಲನಗರ ಸಮೀಪದ ಕೂಡುಮಂಗಳೂರು-ಕೂಡ್ಲೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಕುವೆಂಪು ಕನ್ನಡ ಭಾಷಾ ಸಂಘ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಶಾಲಾಭಿವೃದ್ಧಿ ಸಮಿತಿ ವತಿಯಿಂದ ಭಕ್ತ ಕನಕದಾಸ ಜಯಂತಿಯನ್ನು ಆಚರಿಸಲಾಯಿತು.

ಕನಕದಾಸರ ಜೀವನ ಚರಿತ್ರೆ ಹಾಗೂ ಅವರು ದಾಸ ಸಾಹಿತ್ಯಕ್ಕೆ ನೀಡಿದ ಕೊಡುಗೆ ಕುರಿತು ಮಾತನಾಡಿದ ಕನ್ನಡ ಭಾಷಾ ಶಿಕ್ಷಕ ಕೆ.ಗೋಪಾಲಕೃಷ್ಣ, ಕನಕದಾಸರು ಕರ್ನಾಟಕದಲ್ಲಿ 15, 16ನೇ ಶತಮಾನದಲ್ಲಿ ಜನಪ್ರಿಯವಾದ ಭಕ್ತಿಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರಾಗಿದ್ದು, ಹಲವಾರು ಕೀರ್ತನೆಗಳು ನೀಡಿದ್ದಾರೆ. ಕನಕದಾಸರು ಈ ನಾಡು ಕಂಡ ಶ್ರೇಷ್ಠ ದಾರ್ಶನಿಕ. ಜಾತಿ ವ್ಯವಸ್ಥೆಯ ವಿರುದ್ಧ ಸಮರ ಸಾರಿದ ಭಕ್ತ. ವಿದ್ಯಾರ್ಥಿಗಳು ಕನಕದಾಸರ ಚಿಂತನೆಗಳನ್ನು ಮೈಗೂಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯ ಶಿಕ್ಷಕ ಟಿ.ಜಿ. ಪ್ರೇಮಕುಮಾರ್ ಮಾತನಾಡಿ, ಭಕ್ತ ಕನಕದಾಸರು ದಾಸ ಸಾಹಿತ್ಯದ ಮೂಲಕ ಗಮನ ಸೆಳೆದವರು. ಅವರ ಕೀರ್ತನೆಗಳು ಸಮಾಜಕ್ಕೆ ಪೂರಕವಾಗಿವೆ ಎಂದರು. ಶಿಕ್ಷಕರಾದ ಎಂ.ಟಿ.ದಯಾನಂದ ಪ್ರಕಾಶ್, ಬಿ.ಡಿ.ರಮ್ಯ, ಎಸ್.ಎಂ.ಗೀತಾ ವೇದಿಕೆಯಲ್ಲಿದ್ದರು. ವಿದ್ಯಾರ್ಥಿಗಳು ಕನಕದಾಸರ ಜೀವನ ಚರಿತ್ರೆ ಕುರಿತು ಮಾತನಾಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net