ಜಾನಪದ ಕಲಾವಿದರಿಗೆ ಮಾಸಾಶನ ಸಿಗಲಿ

 ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಶ್ರೀ ಮಹದೇಶ್ವರರ ಜಯಂತಿ ಅಂಗವಾಗಿ ಶ್ರೀ ಮಲೆಮಹದೇಶ್ವರ ಜಯಂತಿ ಮಹೋತ್ಸವ ಸಮಿತಿ ವತಿಯಿಂದ ಪೂಜೆ ಸಲ್ಲಿಸಲಾಯಿತು. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶಿವಮೂರ್ತಿ ಕಾನ್ಯ, ಪ್ರಭುಸ್ವಾಮಿ, ಮಹದೇವಸ್ವಾಮಿ ಇತರರು ಇದ್ದರು.
ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಶ್ರೀ ಮಹದೇಶ್ವರರ ಜಯಂತಿ ಅಂಗವಾಗಿ ಶ್ರೀ ಮಲೆಮಹದೇಶ್ವರ ಜಯಂತಿ ಮಹೋತ್ಸವ ಸಮಿತಿ ವತಿಯಿಂದ ಪೂಜೆ ಸಲ್ಲಿಸಲಾಯಿತು. ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶಿವಮೂರ್ತಿ ಕಾನ್ಯ, ಪ್ರಭುಸ್ವಾಮಿ, ಮಹದೇವಸ್ವಾಮಿ ಇತರರು ಇದ್ದರು.
Published on

ಹನೂರು: ಶ್ರೀ ಮಹದೇಶ್ವರರ ಜಯಂತಿಯನ್ನು ಮುಂದಿನ ದಿನಗಳಲ್ಲಿ ತಾಲೂಕು ಮಟ್ಟದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಶ್ರೀ ಮಲೆಮಹದೇಶ್ವರ ಜಯಂತಿ ಮಹೋತ್ಸವ ಸಮಿತಿ ಅಧ್ಯಕ್ಷ ಶಿವಮೂರ್ತಿ ಕಾನ್ಯ ತಿಳಿಸಿದರು.

ತಾಲೂಕಿನ ಮಲೆಮಹದೇಶ್ವರ ಬೆಟ್ಟದ ದೇಗುಲದಲ್ಲಿ ಗುರುವಾರ ಶ್ರೀ ಮಲೆಮಹದೇಶ್ವರ ಜಯಂತಿ ಅಂಗವಾಗಿ ಆಯೋಜಿಸಿದ್ದ ವಿಶೇಷ ಪೂಜಾ ಕಾರ್ಯಕ್ರಮ ನೆರವೇರಿಸಿ ಮಾತನಾಡಿದರು.

ಉತ್ತರ ದೇಶದಿಂದ ಆಗಮಿಸಿ ತಪಸ್ಸುಗೈದು ಎಪ್ಪತ್ತೇಳು ಮಲೆಗಳಲ್ಲಿ ನೆಲೆಸಿರುವ ಶ್ರೀ ಮಹದೇಶ್ವರರು ಕೋಟ್ಯಂತರ ಭಕ್ತರನ್ನು ಹೊಂದಿದ್ದಾರೆ. ಈ ದಿಸೆಯಲ್ಲಿ ಮಹಾಶಿವರಾತ್ರಿ, ಯುಗಾದಿ, ದೀಪಾವಳಿ ಹಾಗೂ ಇನ್ನಿತರ ಜಾತ್ರಾ ಸಂದರ್ಭದಲ್ಲಿ ರಾಜ್ಯದ ವಿವಿಧೆಡೆಯಿಂದ ಲಕ್ಷಾಂತರ ಭಕ್ತರು ಮ.ಬೆಟ್ಟಕ್ಕೆ ಭೇಟಿ ನೀಡುತ್ತಿದ್ದಾರೆ. ಇದರಿಂದ ಧಾರ್ಮಿಕ ಪ್ರಸಿದ್ಧ ಯಾತ್ರಸ್ಥಳವಾಗಿದೆ. ಹಾಗಾಗಿ ಪ್ರತಿ ವರ್ಷ ಮಾದಪ್ಪನ ಜಯಂತಿ ಅಂಗವಾಗಿ ದೇಗುಲದಲ್ಲಿ ವಿಶೇಷ ಪೂಜೆ ನೆರವೇರಿಸಲಾಗುತ್ತಿದೆ ಎಂದು ತಿಳಿಸಿದರು.

ಮ.ಬೆಟ್ಟದ ತಪ್ಪಲಿನಲ್ಲಿ ಬಹುತೇಕ ಗ್ರಾಮಗಳು ಕಾಡಂಚಿನಲ್ಲಿದ್ದು, ಮೂಲಸೌಕರ್ಯದಿಂದ ವಂಚಿತವಾಗಿವೆ. ಇದರಿಂದ ಜನರು ಕಷ್ಟದ ನಡುವೆ ಜೀವನ ನಡೆಸುತ್ತಿದ್ದಾರೆ. ಹಾಗಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿರುವ ಕಾಂಗ್ರೆಸ್ ಸರ್ಕಾರ ಮ.ಬೆಟ್ಟ ತಪ್ಪಲಿನ ಗ್ರಾಮಗಳಿಗೆ ಅಗತ್ಯ ಮೂಲ ಸೌಕರ್ಯವನ್ನು ಒದಗಿಸುವುದರ ಮೂಲಕ ಅಭಿವೃದ್ಧಿಪಡಿಸಬೇಕು. ಜತೆಗೆ ಜನಪದ ಕಲಾವಿದರಿಗೆ ಮಾಸಾಶನ ಸಿಗುವಂತಹ ಕೆಲಸವಾಗಬೇಕಿದೆ ಎಂದರು.

ಸಾಲೂರು ಬೃಹನ್ಮಠದ ಪೀಠಾಧಿಪತಿ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮಾತನಾಡಿ, ಸಮಿತಿ ವತಿಯಿಂದ ಮ.ಬೆಟ್ಟದಲ್ಲಿ ಶ್ರೀ ಸ್ವಾಮಿಯ ಜಯಂತಿಯನ್ನು ಆಚರಿಸುತ್ತಿರುವುದು ಉತ್ತಮ ಬೆಳವಣಿಗೆ. ಇದರಿಂದ ಭಕ್ತರಲ್ಲಿ ಧಾರ್ಮಿಕತೆ ಇನ್ನಷ್ಟು ವೃದ್ಧಿಗೊಳ್ಳಲಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಕುಂದೂರು ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಸಮಿತಿ ಉಪಾಧ್ಯಕ್ಷ ಪ್ರಭುಸ್ವಾಮಿ, ರಾಜ್ಯ ಪ್ರಶಸ್ತಿ ಪುರಸ್ಕೃತ ಜನಪದ ಕಲಾವಿದ ಮಳವಳ್ಳಿ ಮಹದೇವಸ್ವಾಮಿ, ಕಣ್ಣೂರು ಬಸವರಾಜಪ್ಪ, ಆನಾಪುರದ ಉಮೇಶ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net