ಜಾನಪದ ಕ್ರೀಡೆ, ಸಂಸ್ಕೃತಿ ಉಳಿಸಿ ಬೆಳೆಸಿಸಂಸ್ಕೃತಿ ಉಳಿಸಿ ಬೆಳೆಸಿಜಾನಪದ ಕ್ರೀಡೆ, ಸಂಸ್ಕೃತಿ ಉಳಿಸಿ ಬೆಳೆಸಿ

30Kush02
Published on

ಕುಶಾಲನಗರ: ನಿರಂತರ ಕಾರ್ಯಕ್ರಮ, ಚಟುವಟಿಕೆಗಳ ಮೂಲಕ ಜಾನಪದ ಕ್ರೀಡೆ, ಸಂಸ್ಕೃತಿ ಉಳಿಸಿ ಬೆಳೆಸಲು ಸಾಧ್ಯ ಎಂದು ಕುಶಾಲನಗರದ ಸಮಾಜ ಸೇವಕಿ ಪ್ರಿಯಾಂಕಾ ಗಂಗಾಧರಪ್ಪ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.


ಕುಶಾಲನಗರ ಸಮೀಪದ ಕಣಿವೆ ಶ್ರೀ ರಾಮಲಿಂಗೇಶ್ವರ ರಥೋತ್ಸವ ಪ್ರಯುಕ್ತ ಕರ್ನಾಟಕ ಜಾನಪದ ಪರಿಷತ್ತು ಮತ್ತು ದೇವಾಲಯ ಸಮಿತಿ ಆಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ‘ಹಳ್ಳಿಹಬ್ಬ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಕ್ರೀಡೆಯ ಮೂಲಕ ಪರಸ್ಪರ ಉತ್ತಮ ಬಾಂಧವ್ಯ ವೃದ್ಧಿಯಾಗಲು ಸಾಧ್ಯ ಎಂದು ಹೇಳಿದರು.
ಜಾನಪದ ಪರಿಷತ್ ಜಿಲ್ಲಾ ಖಜಾಂಚಿ ಸಂಪತ್ ಕುಮಾರ್ ಸರಳಾಯ ಮಾತನಾಡಿ, ಜಾನಪದ ಕ್ರೀಡೆಗಳನ್ನು ಹಮ್ಮಿಕೊಳ್ಳುವ ಮೂಲಕ ಜನರಿಗೆ ಜಾನಪದ ಸಂಸ್ಕೃತಿ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದರು.


ಕಣಿವೆ ಶ್ರೀ ರಾಮಲಿಂಗೇಶ್ವರ ದೇವಾಲಯ ಸಮಿತಿ ಅಧ್ಯಕ್ಷ ಕೆ.ಎನ್.ಸುರೇಶ್ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಾಹಿತಿ ಭಾರದ್ವಾಜ ಕೆ. ಆನಂದತೀರ್ಥ, ಪರಿಷತ್ ಮಡಿಕೇರಿ ತಾಲೂಕು ಘಟಕದ ಅಧ್ಯಕ್ಷ ಎಚ್.ಟಿ.ಅನಿಲ್, ಕುಶಾಲನಗರ ತಾಲೂಕು ಘಟಕ ಅಧ್ಯಕ್ಷ ಎಂ.ಎನ್.ಚಂದ್ರಮೋಹನ್, ಗೌರವಾಧ್ಯಕ್ಷೆ ಫ್ಯಾನ್ಸಿ ಮುತ್ತಣ್ಣ, ಕಾರ್ಯಕ್ರಮ ಸಂಯೋಜಕಿ ವನಿತಾ ಚಂದ್ರಮೋಹನ್, ಕಣಿವೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕರುಂಬಯ್ಯ ಉಪಸ್ಥಿತರಿದ್ದರು.


ಈ ಸಂದರ್ಭ ಗ್ರಾಮೀಣ ಕ್ರೀಡೆಗಳಾದ ಕುಂಟೆಬಿಲ್ಲೆ, ಗೋಣಿಚೀಲ ಕಟ್ಟಿ ಓಟ, ಕಣ್ಣಾಮುಚ್ಚಾಲೆ, ಎರಡು ಬಿಂದಿಗೆ ಹೊತ್ತು ಓಡುವ ಸ್ಪರ್ಧೆ, ತೆಂಗಿನಕಾಯಿ ಒಡೆಯುವುದು, ಬುಗರಿ ಆಟ, ಸೈಕಲ್ ಟೈರ್ ಆಟ, ಕೆರೆ- ದಡ ಆಟ, ಸೂಜಿಗೆ ದಾರ ಪೋಣಿಸುತ್ತ ಓಡುವುದು, ಮ್ಯೂಸಿಕಲ್ ಚೇರ್, ಮಡಕೆ ಒಡೆಯುವುದು, ಕಪ್ಪೆ ಓಟ ಮುಂತಾದ ಸ್ಪರ್ಧೆಗಳು ನಡೆದವು. ಸ್ಥಳೀಯ ಸರ್ಕಾರಿ ಶಾಲೆಯ ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಸಾರ್ವಜನಿಕರು, ಪರಿಷತ್ ಸದಸ್ಯರು ಕ್ರೀಡಾ ಸಂಭ್ರಮದಲ್ಲಿ ಪಾಲ್ಗೊಂಡರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net