

ಜಿಲ್ಲೆಯ ಜಾನಪದದ ಬಗ್ಗೆ ಸಮಗ್ರವಾಗಿ ಅಧ್ಯಯನ ಮಾಡಿರುವ ಅವರು ಜಾನಪದ ಕುರಿತು 500ಕ್ಕೂ ಹೆಚ್ಚು ಉಪನ್ಯಾಸ ನೀಡಿದ್ದಾರೆ. ಜಿಲ್ಲೆಯ ಹಲವಾರು ಜಾನಪದ ಕಲಾವಿದರನ್ನು ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಪರಿಚಯಿಸಿದ್ದಾರೆ. ಆರ್ಥಿಕವಾಗಿ ಅಶಕ್ತರಾಗಿರುವ ಕಲಾವಿದರಿಗೆ ವೈಯಕ್ತಿಕವಾಗಿ ಹಣಕಾಸಿನ ನೆರವು ನೀಡಿದ್ದಾರೆ. ನೂರಾರು ಜಾನಪದ ಕಾರ್ಯಕ್ರಮಗಳನ್ನು ಆಯೋಜಿಸಿರುವುದು ಅವರ ಹೆಗ್ಗಳಿಕೆಯಾಗಿದ್ದು, ಹಲವಾರು ವಿದ್ಯಾರ್ಥಿಗಳಿಗೆ ಸಂಶೋಧನೆಗಳಿಗೆ ಮಾರ್ಗದರ್ಶನ ಮಾಡಿದ್ದಾರೆ.
ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿ ಸದಸ್ಯರಾಗಿ ಸೇವೆ ಸಲ್ಲಿಸಿರುವ ಅವರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು. ಹತ್ತು ವರ್ಷಗಳಿಂದ ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರಾಗಿದ್ದಾರೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ ವಿಚಾರ ಸಂಕಿರಣಗಳಲ್ಲಿ, ಸಾಹಿತ್ಯಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದಾರೆ. ವಿವಿಧೆಡೆ ವಿಚಾರ ಸಂಕಿರಣ, ಕಮ್ಮಟ, ಕಾರ್ಯಕ್ರಮ, ಕಲಾಮೇಳಗಳನ್ನು ಸಂಘಟಿಸಿ ಸಂಚಾಲಕರಾಗಿಯೂ ಕೆಲಸ ಮಾಡಿದ ಅನುಭಾವಿಯಾಗಿದ್ದಾರೆ.
ನಲವತ್ತು ವರ್ಷಗಳಿಂದ ಜಾನಪದ , ಸಾಹಿತ್ಯ, ಸಂಶೋಧನೆ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ಕಾರ್ಯನಿರ್ವಹಿಸಿರುವ ಅವರು ಜಾನಪದ ಕುರಿತು ಮೂವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ,ಸಂಪಾದಿಸಿ ಪ್ರಕಟಿಸಿದ್ದಾರೆ. ಸುಮಾರು 200 ಲೇಖನಗಳು ಪ್ರಕಟವಾಗಿವೆ. 2012ರಲ್ಲಿ ಬೆಳಗಾವಿ ಜಿಲ್ಲೆಯ ಹುಗರ್ ಬದರ್‌ನಲ್ಲಿ ನಡೆದಿದ್ದ ರಾಜ್ಯಮಟ್ಟದ ಮೂರನೇ ಜಾನಪದ ಕಲಾವಿದರ ಮಹಾಸಮ್ಮೇಳನದ ಸರ್ವಾಧ್ಯಕ್ಷರೂ ಆಗಿದ್ದರು.
ಜಾನಪದ ವಿಭಾಗದಲ್ಲಿ ಪ್ರಶಸ್ತಿ ಪಡೆದಿರುವ ಡಾ.ಹಂಪನಹಳ್ಳಿ ತಿಮ್ಮೇಗೌಡ, ಜಾನಪದ ವಿದ್ವಾಂಸ, ಸಾಹಿತಿ, ಸಂಶೋಧಕ, ಶಿಕ್ಷಣತಜ್ಞರಾಗಿ ಗುರುತಿಸಿಕೊಂಡಿದ್ದಾರೆ.
ಹಂಪನಹಳ್ಳಿ ತಿಮ್ಮೇಗೌಡ:
ಹಾಸನ: ಜಿಲ್ಲೆಯ ಮೂವರಿಗೆ ಈ ಬಾರಿಯ ರಾಜ್ಯೋತ್ಸವ ಪ್ರಶಸ್ತಿ ಸಂದಿದ್ದು, ನಿವೃತ್ತ ಪ್ರಾಧ್ಯಾಪಕ, ವಾಗ್ಮಿ ನಂ. ವೆಂಕೋಬರಾವ್, ಜಾನಪದ ತಜ್ಞ ಡಾ.ಹಂಪನಹಳ್ಳಿ ತಿಮ್ಮೇಗೌಡ ಹಾಗೂ ರಂಗಭೂಮಿ ಕಲಾವಿದೆ ಅನಸೂಯಮ್ಮ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.
-ಡಾ.ಹಂಪನಹಳ್ಳಿ ತಿಮ್ಮೇಗೌಡ, ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ.
ನಾನು 40 ವರ್ಷಗಳಿಂದ ಜಾನಪದ, ಸಾಹಿತ್ಯ, ವಿಮರ್ಶೆ, ಸಂಶೋಧನೆ ಸೇರಿ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಹಲವು ಸಂಘಟನೆಗಳಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿದ್ದೇನೆ. ಹಲವಾರು ಸಂಶೋಧನೆಗಳಿಗೆ ಮಾರ್ಗದರ್ಶನ ಮಾಡಿದ್ದೇನೆ. ಸರ್ಕಾರ ನನ್ನ ಸೇವೆಯನ್ನು ಗುರುತಿಸಿ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ಅತೀವ ಸಂತಸವುಂಟು ಮಾಡಿದೆ. ಇದಕ್ಕಾಗಿ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ.