ಜಾನಪದ ಪರಿಷತ್ ಜಿಲ್ಲಾಧ್ಯಕ್ಷರಾಗಿ ತಿಮ್ಮೇಗೌಡ ನೇಮಕ

Thimme gowda
Published on

ಮೈಸೂರು: ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷರನ್ನಾಗಿ ಎಸ್‌ಬಿಆರ್‌ಆರ್ ಮಹಾಜನ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಚ್.ಆರ್.ತಿಮ್ಮೇಗೌಡ ಅವರನ್ನು ನೇಮಕ ಮಾಡಲಾಗಿದೆ. ಮೂರು ದಶಕಗಳಿಂದ ಮಹಾಜನ ಕಾಲೇಜಿನಲ್ಲಿ ಕನ್ನಡ ಪ್ರಾಧ್ಯಾಪಕರಾಗಿ, ಸಂಘಟಕರಾಗಿ, ಮೈಸೂರು ವಿಶ್ವವಿದ್ಯಾನಿಲಯದ ಪದವಿ ಕನ್ನಡ ಅಧ್ಯಾಪಕರ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಒಳದನಿ, ಕೋಳಲದನಿ, ಸಂವೇದನೆ, ಭಾರತೀಯ ಕಾವ್ಯಮೀಮಾಂಸೆ ಸಮೀಕ್ಷೆ- ಒಂದು ಅವಲೋಕನ, ಸಂಕ್ಷಿಪ್ತ ಶಬ್ದಮಣಿದರ್ಪಣ, ಕನ್ನಡ ಸಾಹಿತ್ಯದಲ್ಲಿ ಪ್ರಗತಿಶೀಲರ ಸಣ್ಣಕತೆಗಳು ಸೇರಿದಂತೆ ಇನ್ನಿತರ ಕೃತಿಗಳನ್ನು ರಚಿಸಿದ್ದಾರೆ. ಉತ್ತಮ ಶಿಕ್ಷಕ ಪ್ರಶಸ್ತಿ, ಉತ್ತಮ ಎನ್‌ಎಸ್‌ಎಸ್ ಕಾರ್ಯಕ್ರಮಾಧಿಕಾರಿ ಪ್ರಶಸ್ತಿ, ಪರಿಸರಮಿತ್ರ ಪ್ರಶಸ್ತಿ ಮತ್ತು ಆದರ್ಶ ಗುರು ಪ್ರಶಸ್ತಿ ಲಭಿಸಿದೆ ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net