

ಚಿತ್ರದುರ್ಗ: ತಾಲೂಕಿನ ಜಾನುಕೊಂಡ ಗ್ರಾಪಂಗೆ ತೆರವಾಗಿದ್ದ ಅಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಮಂಜುಳಾ ಅವರು ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ.
ಪಂಚಾಯಿತಿ ಸದಸ್ಯರ ಬಲದಿಂದ ಜಯಗಳಿಸಿ, ಅಧ್ಯಕ್ಷ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಅನುದಾನದಡಿ ಗ್ರಾಪಂ ವ್ಯಾಪ್ತಿಯ ಎಲ್ಲ ಹಳ್ಳಿಗಳ ಅಭಿವೃದ್ಧಿ ಕಾರ್ಯಕ್ಕೆ ಒತ್ತು ನೀಡಲಾಗುವುದು ಎಂದು ಮಂಜುಳಾ ತಿಳಿಸಿದರು.