ಜಾನುವಾರಗಳ ರಕ್ಷಣೆಗೆ ಸರ್ಕಾರ ಬದ್ಧ

CTD 2 TURUVANURU--006
Published on

ಚಿತ್ರದುರ್ಗ: ನಮ್ಮ ಸರ್ಕಾರ ವಿಧಾನಸಭಾ ಚುನಾವಣೆಗೂ ಮುನ್ನ ನೀಡಿದ್ದ ಭರವಸೆಯಂತೆ ಜಾರಿಗೊಳಿಸಿರುವ ಎಲ್ಲ ಗ್ಯಾರಂಟಿ ಯೋಜನೆಗಳು ಜನಪರವಾಗಿವೆ ಎಂದು ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಹೇಳಿದರು.
ತಾಲೂಕು ಆಡಳಿತ ಹಾಗೂ ತಾಪಂ ಹಾಗೂ ತಾಲೂಕು ಮಟ್ಟದ ಗ್ಯಾರೆಂಟಿ ಯೋಜನೆಗಳ ಅನುಷ್ಠಾ ಸಮಿತಿ ಸಹಯೋಗದಲ್ಲಿ ಚಿತ್ರ ದುರ್ಗ ತಾಲೂಕು ತುರುವನೂರಲ್ಲಿ ಶುಕ್ರವಾರ ಏರ್ಪಡಿಸಿದ್ದ ಹೋಬಳಿ ಮಟ್ಟದ ಗ್ಯಾರೆಂಟಿ ಯೋಜನೆಗಳ ಕುರಿತ ಸಮಾವೇಶದಲ್ಲಿ ಮಾ ತನಾಡಿದ ಅವರು,ಕೊಟ್ಟಿದ್ದ ಭರವಸೆಯಂತೆ ಶಕ್ತಿ, ಅನ್ನಭಾಗ್ಯ, ಗೃಹಜ್ಯೋತಿ, ಗೃಹಲಕ್ಷ್ಮೀ ಹಾಗೂ ಯುವನಿಧಿ ಗ್ಯಾರಂಟಿಗಳನ್ನು ಜನರಿಗೆ ತಲುಪಿಸಿದ್ದೇವೆ. ಪ್ರಸ್ತುತ ಬರ ಪರಿಸ್ಥಿತಿ ಇರುವುದರಿಂದ ಜಾನುವಾರುಗಳ ರಕ್ಷಣೆಗೆ ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಗೋಶಾಲೆ ಯನ್ನು ಪ್ರಾರಂಭಿಸಲಾಗಿದೆ ಎಂದರು.
ಚಿತ್ರದುರ್ಗ ತಹಸಿಲ್ದಾರ್ ಡಾ.ನಾಗವೇಣಿ,ತಾಲೂಕು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಧಿಕಾರಿ ಸುಧಾ, ಗ್ರಾಪಂ ಅಧ್ಯಕ್ಷೆ ದೀಪಾ ಮಹೇಶ್,ಉಪಾಧ್ಯಕ್ಷ ತಿಪ್ಪೇಸ್ವಾಮಿ,ಸದಸ್ಯರು,ಮುಖಂಡರಾದ ಸಂತೋಷ್, ಕಾಕಿ ಹನುಮಂತರೆಡ್ಡಿ,ವೀವೇಕಪ್ಪ, ನಾಗರಾಜ್,ಪವನ್ ಕುಮಾರ್,ಡಿ.ಆರ್.ಮಂಜುನಾಥ್ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net