ಜಾನುವಾರುಗಳಿಗೆ ಲಸಿಕೆ ಕಡ್ಡಾಯವಾಗಿ ಹಾಕಿಸಿ

26ydg02
Published on


ಯಾದಗಿರಿ: ಗ್ರಾಮೀಣ ಭಾಗದಲ್ಲಿನ ರೈತಾಪಿ ವರ್ಗ ತಮ್ಮ ಜಾನುವಾರುಗಳ ಆರೋಗ್ಯ ಕಾಪಾಡಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಶಾಸಕ ಚನ್ನಾರಡ್ಡಿ ಪಾಟೀಲ್ ತುನ್ನೂರ ಸಲಹೆ ನೀಡಿದರು.

ಇಲ್ಲಿನ ತಾಲೂಕು ಪಶು ಆಸ್ಪತ್ರೆ ಆವರಣದಲ್ಲಿ 4ನೇ ಸುತ್ತಿನ ಕಾಲು ಬಾಯಿ ರೋಗ ಲಸಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಪಶು ಇಲಾಖೆ ಸಿಬ್ಬಂದಿ ನಿಮ್ಮ ಗ್ರಾಮಕ್ಕೆ, ಮನೆ ಬಾಗಿಲಿಗೆ ಭೇಟಿ ನೀಡಿ ಜಾನುವಾರುಗಳಿಗೆ ಲಸಿಕೆ ಹಾಕಲಿದ್ದಾರೆ. ಯಾರೂ ಕೂಡ ತಮ್ಮ ಎಮ್ಮೆ, ದನಕರುಗಳನ್ನು ಲಸಿಕೆಯಿಂದ ವಂಚಿತರಾಗದಂತೆ ಜಾಗೃತಿ ವಹಿಸಬೇಕು ಎಂದು ಕಿವಿಮಾತು ಹೇಳಿದರು.

ಕಾಲುಬಾಯಿ ರೋಗ ತಡೆಯಲು ಲಸಿಕೆ ರಾಮಬಾಣ. ಜಿಲ್ಲೆಯಲ್ಲಿ ಶೇ.100ರಷ್ಟು ಲಸಿಕಾ ಪ್ರಗತಿ ಸಾಧಿಸಬೇಕು. ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಇಂದಿನಿಂದ ಅ.25ರ ವರೆಗೆ ಉಚಿತವಾಗಿ ಲಸಿಕೆ ಹಾಕಲಾಗುತ್ತಿದೆ. ಈ ರೋಗ ಎತ್ತು, ಹೋರಿ, ಹಸು, ಎಮ್ಮೆ ಮತ್ತು ಹಂದಿಗಳಲ್ಲಿ ಹರಡುತ್ತದೆ. ಪೂರ್ಣ ಸುರಕ್ಷತೆಗಾಗಿ ಮೂರು ತಿಂಗಳ ಮೇಲ್ಪಟ್ಟ ಎಲ್ಲ ಜಾನುವಾರುಗಳಿಗೆ ಲಸಿಕೆ ಹಾಕುವುದು ಅತ್ಯಗತ್ಯ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net