ಜಾಲತಾಣಗಳ ಇತಿಮಿತಿ ಅರಿತುಕೊಳ್ಳಿ

24.npk-1
Published on

ಹಂಪಿ ಕನ್ನಡ ವಿವಿ ಹಿರಿಯ ಪ್ರಾಧ್ಯಾಪಕ ಮಾಧವ ಸಲಹೆ

ನಾಪೋಕ್ಲು: ಯುವಕರು ಆಧುನಿಕ ಕಾಲದ ಜಾಲತಾಣಗಳ ಮಹತ್ವ, ಇತಿಮಿತಿ ಮತ್ತು ಅರಿತುಕೊಂಡು ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ಹಂಪಿ ಕನ್ನಡ ವಿಶ್ವ ವಿದ್ಯಾನಿಲಯದ ಹಿರಿಯ ಪ್ರಾಧ್ಯಾಪಕ ಡಾ. ಮಾಧವ ಪೆರಾಜೆ ಹೇಳಿದರು.

ಅಗ್ನಿ ಯುವಕ ಮಂಡಲದ ವತಿಯಿಂದ ಪೆರಾಜೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಹಮ್ಮಿಕೊಂಡಿದ್ದ ಕ್ರೀಡಾಕೂಟ ಮತ್ತು ಸನ್ಮಾನ ಸಮಾರಂಭದಲ್ಲಿ ಮಾತನಾಡಿದರು. ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದ ನಾಗೇಶ ಕುಂದಲ್ಪಾಡಿ, ಯುವಕರು ಸವಾಲುಗಳನ್ನು ಸ್ವೀಕರಿಸಿಕೊಂಡು ಬದುಕು ಕಟ್ಟಿಕೊಳ್ಳಬೇಕು ಎಂದು ಕರೆ ನೀಡಿದರು.

ವೈದ್ಯ ಡಾ. ರಾಘವೇಂದ್ರ ಪ್ರಸಾದ್ ಅವರನ್ನು ಸನ್ಮಾನಿಸಲಾಯಿತು. ಸಂಘದ ಅಧ್ಯಕ್ಷ ಪ್ರಶಾಂತ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಮುಖ್ಯ ಶಿಕ್ಷಕ ದೊಡ್ಡಣ್ಣ ಬರೆಮೇಲೆ, ಜ್ಯೋತಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯ ನಾಗರಾಜ್, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಕ್ರೀಡಾಕೂಟ ವಿಜೇತರಿಗೆ ಬಹುಮಾನ ವಿತರಿಸ ಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net