ಜಾಸ್ಮಿನ್ ಶಾಲೆ ವಾರ್ಷಿಕೋತ್ಸವ

Jasmine School Annual Day Photo
Published on

ಬೀದರ್: ಇಲ್ಲಿಯ ಜಾಸ್ಮಿನ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕೋತ್ಸವ ಕಾರ್ಯಕ್ರಮ ಸಡಗರ, ಸಂಭ್ರಮದಿಂದ ನಡೆಯಿತು.
ಉದ್ಘಾಟನೆ ನೆರವೇರಿಸಿದ ಜಾಸ್ಮಿನ್ ಎಜುಕೇಷನ್ ಟ್ರಸ್ಟ್ ಅಧ್ಯಕ್ಷ ಅಜೀಜ್ ಖಾನ್ ಅವರು, ವಿದ್ಯಾರ್ಥಿಗಳು ಜೀವನದಲ್ಲಿ ಉನ್ನತ ಗುರಿ ಇಟ್ಟುಕೊಳ್ಳಬೇಕು ಎಂದು ಸಲಹೆ ಮಾಡಿದರು.
ಶಾಲೆಯಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಲಾಗುತ್ತಿದೆ. ಸ್ಪರ್ಧಾತ್ಮಕ ಯುಗದ ಸವಾಲು ಎದುರಿಸಲು ಅಣಿಗೊಳಿಸಲಾಗುತ್ತಿದೆ ಎಂದು ಹೇಳಿದರು.
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯ ಡಾ. ಎಸ್. ಆರ್. ಜೋಶಿ ಅವರನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಜರುಗಿದವು. ಮುಖ್ಯಶಿಕ್ಷಕಿ ಬ್ಯೂಲಾರಾಣಿ, ಗಣ್ಯರು ಹಾಗೂ ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net