ಜಿಂದಾಲ್ ವಿರುದ್ಧ ಮೇ. 20 ರಂದು ಪ್ರತಿಭಟನೆ

Published on

ಬಳ್ಳಾರಿ : ಜಿಲ್ಲೆಯ ವಿವಿಧ ಸಂಘಟನೆಗಳಿಂದ ಜಿಂದಾಲ್ ವಿರುದ್ಧ ಮೇ. 20 ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಿಐಟಿಯು ಜಿಲ್ಲಾದ್ಯಕ್ಷ ಸತ್ಯಬಾಬು ಹೇಳಿದರು.
ನಗರದ ಖಾಸಗಿ ಹೋಟೆಲ್‌ನಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜಿಂದಾಲ್‌ನಲ್ಲಿ ಇತ್ತಿಚೇಗೆ ಮೂವರು ಅಧಿಕಾರಿಗಳು ದುರ್ಮರಣ ಹೊಂದಿದ್ದಾರೆ. ಮೃತಕ್ಕೆ ಜಿಂದಾಲ್ ಅಧಿಕಾರಿಗಳ ಬೇಜವಾಬ್ದಾರಿ ಎದ್ದು ಕಾಣುತ್ತಿದೆ. ಜಿಂದಾಲ್‌ನಲ್ಲಿ ಮೂವರು ಅಧಿಕಾರಿಗಳು ಮೃತಪಟ್ಟರೂ ಸ್ಥಳೀಯ ಶಾಸಕ ಈ. ತುಕರಾಮ್ ಹಾಗೂ ಕಾರ್ಮಿಕ ಸಚಿವ ಸಂತೋಷ ಲಾಡ್ ಸೌಜನ್ಯಕ್ಕೆ ಆಗಲಿ ಕುಟುಂಬದರನ್ನು ಭೇಟಿ ನೀಡಿಲ್ಲ. ಕಾರ್ಮಿಕ ಇಲಾಖೆ, ಕೈಗಾರಿಕಾ ಬಾಯ್ಲರ್ ಕಾರ್ಮಿಕರ ಸುರಕ್ಷತೆ ಮತ್ತು ಆರೋಗ್ಯ ಇಲಾಖೆ, ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಮತ್ತು ಪೊಲೀಸ್ ಇಲಾಖೆ ಮಾಲೀಕರ ಒತ್ತಡಕ್ಕೆ ಮಣಿದು ಕಾರ್ಮಿಕರ ರಕ್ಷಣೆ ವಿಷಯದಲ್ಲಿ ಸಂಪೂರ್ಣ ವಿಫಲವಾಗಿದೆ. ವಿಭಾಗದ ಮುಖ್ಯಸ್ಥರು ಹಾಗೂ ಕೈಗಾರಿಕಾ ನಿರ್ವಹಣಾ ಮಂಡಳಿ ಅಧ್ಯಕ್ಷ, ಮಾನವ ಸಂಪನ್ಮೂಲ ವಿಭಾಗದ ಉಪಾಧ್ಯಕ್ಷ ಅವರ ಹೆಸರಲ್ಲಿ ಎಫ್‌ಐಆರ್‌ನಲ್ಲಿ ಸೇರಿಸಲಾಗಿದೆ. ಕಾನೂನು ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು. ಮೃತಪಟ್ಟ ಕುಟುಂಬಗಳಿಗೆ ಉದ್ಯೋಗ ಮತ್ತು ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಚನ್ನಬಸಯ್ಯ, ಸೋಮಪ್ಪ, ಚಂದ್ರಕುಮಾರಿ, ಎರ‌್ರಿಸ್ವಾಮಿ, ತಿಪ್ಪೇಸ್ವಾಮಿ, ರಾಣಿ ಎಲಿಜೆಬೆತ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net