ಜಿಎಸ್‌ಟಿ ಲಾಭದ ಬಗ್ಗೆ ಜನರಿಗೆ ಮನವರಿಕೆ ಮಾಡಿಕೊಡಿ

28-OCT-GPT-4
Published on

ಗುಂಡ್ಲುಪೇಟೆ: ಬೆಲೆ ಏರಿಕೆಯಿಂದ ತತ್ತರಿಸುತ್ತಿರುವ ಜನತೆಯ ಅನುಕೂಲಕ್ಕೆ ಕೇಂದ್ರ ಸರ್ಕಾರ ಜಿಎಸ್‌ಟಿ ಕಡಿತ ಮಾಡಿದ್ದರಿಂದಾಗುತ್ತಿರುವ ಲಾಭದ ಬಗ್ಗೆ ಜನತೆಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ವಿಶ್ವನಾಥ ಭಟ್ ಹೇಳಿದರು.

ಬಿಜೆಪಿ ವತಿಯಿಂದ ಪಟ್ಟಣದ ಸಿಎಂಎಸ್ ಕಲಾಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ ಜಿಎಸ್‌ಟಿ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

18 ಇದ್ದ ಜಿಎಸ್‌ಟಿಯನ್ನು 12ಕ್ಕೆ ಇಳಿಸಿದೆ. ಇದು ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯವಾಗಿದ್ದು, ಕಾಂಗ್ರೆಸ್ ಅವಯಲ್ಲಿ ನಿರೀಕ್ಷೆಯನ್ನು ಮಾಡುವಂತಿರಲಿಲ್ಲ. ಜಿಎಸ್‌ಟಿ ಕಡಿತದ ನೇರ ಪರಿಣಾಮ ಗ್ರಾಹಕರು ಮತ್ತು ರೈತರಿಗೆ ದೊರಕಿದೆ. ಜನತೆಯ ದಿನಬಳಕೆ ವಸ್ತುಗಳು, ಬೈಕ್, ಕಾರು, ಗೃಹಬಳಕೆಯ ವಸ್ತುಗಳ ಬೆಲೆ ತುಂಬಾ ಕಡಿಮೆಯಾಗಿದೆ. ಈ ಬಗ್ಗೆ ಬಿಜೆಪಿ ಕಾರ್ಯಕರ್ತರು ಮನೆ ಮನೆಗಳಿಗೆ ಹೋಗಿ ತಿಳಿಸುವ ಮೂಲಕ ನರೇಂದ್ರ ಮೋದಿ ಅವರ ಕೊಡುಗೆಗಳ ಬಗ್ಗೆ ಮನವರಿಕೆ ಮಾಡಬೇಕು ಎಂದು ಹೇಳಿದರು.

ಮಾಜಿ ಶಾಸಕ ಬಿಜೆಪಿ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನಕುಮಾರ್, ಮಂಡಲಾಧ್ಯಕ್ಷ ಸಿ.ಮಹದೇವಪ್ರಸಾದ್, ಮಾಜಿ ಅಧ್ಯಕ್ಷರಾದ ಎಲ್.ಸುರೇಶ್, ಎನ್.ಮಲ್ಲೇಶ್, ಪ್ರಧಾನ ಕಾರ್ಯದರ್ಶಿ ಸುನಿಲ್ ಮೂಡ್ಲು, ಪುರಸಭೆ ಸದಸ್ಯ ನಾಗೇಶ್, ಮುಖಂಡರಾದ ನವೀನ್ ವೌರ್ಯ, ಬಾಲರಾಜು, ರಾಜಶೆಟ್ಟಿ, ಲೋಕೇಶ್ ಹಾಗೂ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net