ಮುಳಬಾಗಿಲು:ಜೀವನದಲ್ಲಿ ಜಿಗುಪ್ಸೆಗೊಂಡು ನ.-13ರಂದು ಮನೆಯಲ್ಲೇ ವಿಷ ಸೇವನೆ ಮಾಡಿದ್ದ ಕೋಲಾರ ಮೂಲದ ಮಂಜುನಾಥ್ (35) ಅವರು ಚಿಕಿತ್ಸೆ ನಂತರ ಚೇತರಿಸಿಕೊಂಡರೂ ಸಹ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡು ಮಂಗಳವಾರ ಆಸ್ಪತ್ರೆಗೆ ಸೇರಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ. ತಾಲೂಕಿನ ನಂಗಲಿ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಮಂಜುನಾಥ್ ಅವರನ್ನು ನ.13ರಂದು ಕೋಲಾರ ನಗರ ಟಮಕದ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ನಂತರ ಕಳೆದ ಎರಡು ದಿನಗಳ ಹಿಂದೆ ಮನೆಗೆ ಬಂದಿದ್ದರು. ಮಂಗಳವಾರ ಮತ್ತೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಕುಟುಂಬದವರು ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ದಾರಿಯಲ್ಲಿ ಮೃತಪಟ್ಟಿದ್ದಾನೆ. ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ. ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.