ಜಿಟಿಟಿಸಿಯಲ್ಲಿ ಕ್ಯಾಂಪಸ್ ಸಂದರ್ಶನ

download (1)
Published on

ಮೈಸೂರು: 2022-23ನೇ ಸಾಲಿನ ಎರಡು ವರ್ಷ ಅವಧಿಯ ಎಂ.ಟೆಕ್ ಇನ್‌ಟೂಲ್ ಇಂಜಿನಿಯರಿಂಗ್ ಪ್ರವೇಶಕ್ಕಾಗಿ ಬಿಇ ಮೆಕ್ಯಾನಿಕಲ್, ಇಂಡಸ್ಟ್ರಿಯಲ್ ಪ್ರೊಡಕ್ಷನ್, ಆಟೋಮೊಬೈಲ್, ಮೇರಿನ್, ಆಟೋಮೇಷನ್ ಮತ್ತು ರೋಬಾಟಿಕ್ಸ್ ಇಂಜಿನಿಯರಿಂಗ್ ಮುಂತಾದವುಗಳಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ವತಿಯಿಂದ ಅರ್ಜಿ ಆಹ್ವಾನಿಸಲಾಗಿದೆ.


ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ದೇಶ, ವಿದೇಶದ ವಿವಿಧ ಕೈಗಾರಿಕೆಗಳಲ್ಲಿ ಬಹಳ ಬೇಡಿಕೆ ಇದೆ. ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಇನ್ಫೋಸಿಸ್, ಟಿ.ಸಿ.ಎಸ್, ಬಾಷ್, ಟೊಯೊಟಾ ಮುಂತಾದ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿದ್ದಾರೆ. ಈ ಸಂಸ್ಥೆ ವತಿಯಿಂದ ತರಬೇತಿಯನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕ್ಯಾಂಪಸ್ ಸಂದರ್ಶನ ಆಯೋಜಿಸಲಾಗಿರುತ್ತದೆ.


ಮಾಹಿತಿಗಾಗಿ ಮೊ: 8762140256, 9243989954 ಸಂಪರ್ಕಿಸಬಹುದು ಎಂದು ಜಿ.ಟಿ.ಟಿ.ಸಿಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net