ಜಿನ್ನಾಗರಮ್ಮದೇವಿ ಬೆಟ್ಟಕ್ಕೆ ಹಾನಿ ಮಾಡದಿರಿ, ಸಂಸದ ಬಚ್ಚೇಗೌಡ, ಶಾಸಕ ಶರತ್ ಬಚ್ಚೇಗೌಡರಿಂದ ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಮನವಿ

03-Manjunath-HSK-02
Published on

ಹೊಸಕೋಟೆ: ತಾಲೂಕಿನಲ್ಲಿ ಬೆಂಗಳೂರು-ಚೆನ್ನೈ ಕಾರಿಡಾರ್ ಕಾಮಗಾರಿ ಕೈಗೊಳ್ಳಲಾಗಿದ್ದು, ಈ ಕಾಮಗಾರಿಯಿಂದ ತಾಲೂಕಿನ ಐತಿಹಾಸಿಕ ಜಿನ್ನಾಗರಮ್ಮದೇವಿ ಬೆಟ್ಟಕ್ಕೆ ಹಾನಿಯಾಗಲಿದೆ. ಆದ್ದರಿಂದ ಈ ಹಾನಿಯನ್ನು ತಡೆಯುವಂತೆ ಕೇಂದ್ರದ ಹೆದ್ದಾರಿ ಮಂತ್ರಿ ನಿತಿನ್ ಗಡ್ಕರಿ ಅವರನ್ನು ದೆಹಲಿಯಲ್ಲಿ ಇತ್ತೀಚೆಗೆ ಭೇಟಿಯಾದ ಸಂಸದ ಬಿ.ಎನ್. ಬಚ್ಚೇಗೌಡ, ಶಾಸಕ ಶರತ್ ಬಚ್ಚೇಗೌಡ ಮನವಿ ಮಾಡಿದ್ದಾರೆ.

ತಾಲೂಕಿನಲ್ಲಿ ಹಾದು ಹೋಗುವ ಹೊಸಕೋಟೆ-ಚಿಂತಾಮಣಿ ರಸ್ತೆ ಹಾಗೂ ಅದಕ್ಕೆ ಹೊಂದಿಕೊಂಡ ಪುಲಿವೆಂದಲ-ಕಡಪ ರಸ್ತೆ ಹಾಗೂ ಹೊಸಕೋಟೆ-ಮಾಲೂರು ರಸ್ತೆ ಹಾಗೂ ಅದಕ್ಕೆ ಹೊಂದಿಕೊಂಡಿರುವ ಕೆಜಿಎ್ ಹಾಗೂ ಬಂಗಾರಪೇಟೆ ರಸ್ತೆ ರಾಜ್ಯ ಹೆದ್ದಾರಿಗಳಾಗಿದ್ದು, ಈ ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸಿದರೆ ಈ ಭಾಗದಲ್ಲಿ ರಸ್ತೆ ಅಭಿವೃದ್ಧಿ ಜತೆಗೆ ವಾಣಿಜ್ಯ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಶರತ್ ಬಚ್ಚೇಗೌಡ ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ, ಜಿನ್ನಾಗರದಲ್ಲಿರುವ ಗುಟ್ಟಕ್ಕೆ ಹಾನಿಯಾಗದಂತೆ ಮತ್ತೊಂದು ನಕ್ಷೆ ಸಿದ್ಧಪಡಿಸಲು ಅಧಿಕಾರಿಗಳಿಗೆ ತಿಳಿಸುವುದಾಗಿ ಭರವಸೆ ನೀಡಿದರು. ರಾಜ್ಯ ಹೆದ್ದಾರಿಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮಾರ್ಪಾಡು ಮಾಡುವ ಬಗ್ಗೆ ಆದಷ್ಟು ಬೇಗ ತೀರ್ಮಾನ ಕೈಗೊಳ್ಳಲಾಗುವುದು ಎಂದು ಗಡ್ಕರಿ ತಿಳಿಸಿದ್ದಾರೆ ಎಂದು ಸಂಸದರು ಮಾಹಿತಿ ನೀಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net