ಜಿಪಂ, ತಾಪಂ ಚುನಾವಣೆಗೆ ಸಜ್ಜಾಗಿ

9KMD-1
ಕೆ.ಎಂ. ದೊಡ್ಡಿಯಲ್ಲಿ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ಕಾರ್ಯಕರ್ತರು ಅಭಿನಂದಿಸಿದರು.
Published on

ಕೆ.ಎಂ.ದೊಡ್ಡಿ: ಮುಂಬರುವ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗೆ ಕಾಂಗ್ರೆಸ್ ಕಾರ್ಯಕರ್ತರು ಸಿದ್ಧತೆ ಮಾಡಿಕೊಳ್ಳುವಂತೆ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದರು.

ಮದ್ದೂರು-ಮಳವಳ್ಳಿ ಮುಖ್ಯರಸ್ತೆಯಲ್ಲಿ ಕಾರ್ಯನಿಮಿತ್ತ ಮಳವಳ್ಳಿಗೆ ತೆರಳುತಿದ್ದ ವೇಳೆ ವಿಶ್ವೇಶ್ವರಯ್ಯ ವೃತ್ತದ ಬಳಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರಿಂದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪರ ಅಲೆ ಎದ್ದಿದ್ದು ಮುಂದಿನ ಜಿ.ಪಂ. ಮತ್ತು ತಾ.ಪಂ. ಚುನಾವಣೆಯಲ್ಲೂ ಪಕ್ಷ ಜಯ ಗಳಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷದ ಮೇಲೆ ಜನತೆ ವಿಶ್ವಾಸವಿಟ್ಟು ಗೆಲ್ಲಿಸಿರುವ ಜನತೆಗೆ ನಾವು ಚಿರಋಣಿಯಾಗಿದ್ದು, ಜಿಲ್ಲೆಯ ಅಭಿವೃದ್ಧಿಗೆ ಎಲ್ಲ ಶಾಸಕರು ಶ್ರಮಿಸಲಿದ್ದಾರೆ. ಮೈಷುಗರ್ ಪುನಶ್ಚೇತನಕ್ಕೆ ಸರ್ಕಾರ ಅನುದಾನ ನೀಡಲು ಸಮ್ಮತಿಸಿದ್ದು ಜನಪರ ಆಡಳಿತ ನೀಡುತ್ತೇವೆ ಎಂದರು.
ನನಗೆ ಕೃಷಿ ಖಾತೆ ದೊರೆತಿದ್ದು ರೈತರಿಗೆ ನೆರವಾಗಲು ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ. ಕೃಷಿ ಇಲಾಖೆಯಿಂದ ಸಿಗುವ ಸವಲತ್ತುಗಳನ್ನು ರೈತರಿಗೆ ನೇರವಾಗಿ ದೊರಕುವಂತೆ ಮಾಡಲು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ ಎಂದು ಹೇಳಿದರು.
ರಾಜಸ್ಥಾನ ಪೇಟ ತೋಡಿಸಿದ ಅಭಿಮಾನಿ: ಕೃಷಿ ಸಚಿವ ಚಲುವರಾಯಸ್ವಾಮಿ ಅವರಿಗೆ ಕೆ.ಎಂ.ದೊಡ್ಡಿಯ ಸಜ್ಜನ್ ಆರ್ಕೆಡ್ ಮಾಲೀಕ, ಉದ್ಯಮಿ ಸಜ್ಜನ್ ಪುರೋಹಿತ್ ರಾಜಸ್ಥಾನ ಪೇಟ ತೋಡಿಸಿ ಅಭಿನಂಧಿಸಿ ಕನ್ನಡ ಪುಸ್ತಕ ನೀಡಿ ಅಭಿಮಾನ ಮೆರೆದರು.
ಜಿ.ಪಂ. ಮಾಜಿ ಸದಸ್ಯ ಎ.ಎಸ್.ರಾಜೀವ್, ಕಾವೇರಿ ನೀರಾವರಿ ನಿಗಮದ ನಿವೃತ್ತ ಕಾರ್ಯಪಾಲಕ ಇಂಜಿನಿಯರ್ ಹಾಗಲಹಳ್ಳಿ ಬಸವರಾಜೇಗೌಡ, ಬ್ಯಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ಎಂ.ನಂಜೇಗೌಡ, ಡಿಸಿಸಿ ಬ್ಯಾಂಕ್ ಮಾಜಿ ನಿರ್ದೇಶಕ ದೇವರಹಳ್ಳಿ ದೊಡ್ಡೇಗೌಡ, ತಾ.ಪಂ.ಮಾಜಿ ಸದಸ್ಯ ಬಿ.ಗಿರೀಶ್, ಟಿಎಪಿಸಿಎಂಎಸ್ ಮಾಜಿ ಅಧ್ಯಕ್ಷ್ಷ ಮೆಣಸಗೆರೆ ಪ್ರಕಾಶ್, ಅಣ್ಣೂರು ಸೊಸೈಟಿ ಮಾಜಿ ಅಧ್ಯಕ್ಷ ಆರ್.ಸಿದ್ದಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಅಣ್ಣೂರು ಚಂದ್ರಶೇಖರ್, ಯಲಾದಹಳ್ಳಿ ನಿಂಗೇಗೌಡ, ಮುಖಂಡರಾದ ಹಾಗಲಹಳ್ಳಿ ಪುಟ್ಟಸ್ವಾಮಿ, ಕೆ.ವಿ.ಶ್ರೀನಿವಾಸ್ ಸೇರಿದಂತೆ ಹಲವರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net