ಜಿಪಂ ಸಿಇಒ ಡಾ. ಸುಶೀಲಾ ಅಧಿಕಾರ ಸ್ವೀಕಾರ

10 vikram 1
Published on

ಧಾರವಾಡ: ಇಲ್ಲಿನ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಯಾಗಿ ಡಾ. ಸುಶೀಲಾ ಬಿ. ಅವರು ಶುಕ್ರವಾರ ಅಧಿಕಾರ ಸ್ವೀಕರಿಸಿದರು. ವರ್ಗಾವಣೆಗೊಂಡ ಸಿಇಒ ಡಾ.ಬಿ.ಸಿ. ಸತೀಶ ಅಧಿಕಾರ ಹಸ್ತಾಂತರಿಸಿದರು.

ಹೈದರಾಬಾದ್​ನ ಗಾಂಧಿ ಮೆಡಿಕಲ್ ಕಾಲೇಜಿನಿಂದ ವೈದ್ಯಕೀಯ ಪದವಿ ಪಡೆದಿರುವ ಡಾ. ಸುಶೀಲಾ ಅವರು, ಕೆಲಕಾಲ ವೈದ್ಯಕೀಯ ವೃತ್ತಿ ನಡೆಸಿ ನಂತರ 2013ರ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಭಾರತೀಯ ರೈಲ್ವೆ ಸಿಬ್ಬಂದಿ ಸೇವೆಗೆ ಅರ್ಹತೆ ಪಡೆದರು. 2015ರ ನಾಗರಿಕ ಸೇವಾ ಪರೀಕ್ಷೆಗಳಲ್ಲಿ ಭಾರತೀಯ ಆಡಳಿತ ಸೇವೆ (ಐಎಎಸ್) ಕರ್ನಾಟಕ ಕೇಡರ್​ಗೆ ಆಯ್ಕೆಯಾದರು.

ರಾಯಚೂರಿನಲ್ಲಿ ಜಿಲ್ಲಾ ತರಬೇತಿ, ಸೇಡಂ ಹಾಗೂ ಕಲಬುರಗಿಯಲ್ಲಿ ಉಪವಿಭಾಗಾಧಿಕಾರಿಯಾಗಿ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಉಪಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿ ಇದೀಗ ಬಡ್ತಿಯೊಂದಿಗೆ ಧಾರವಾಡ ಜಿಪಂ ಹುದ್ದೆ ಸ್ವೀಕರಿಸಿದ್ದಾರೆ.

EndFragment

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net