ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪರ್ವೇಜ್

Photo Ahsan Kamal Parvez
Published on

ಬೀದರ್: ಯುವ ಮುಖಂಡ ಅಹಸಾನ್ ಕಮಲ್ ಪರ್ವೇಜ್ ಅವರನ್ನು ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ. ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಅಹಸಾನ್ ಕಮಲ್ ಪರ್ವೇಜ್ ಅವರು ಮಾಜಿ ಶಾಸಕ ಮೊಹಸಿನ್ ಕಮಲ್ ಅವರ ಪುತ್ರರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಕಟ್ಟಾ ಕಾರ್ಯಕರ್ತರಾಗಿದ್ದಾರೆ. ಪಕ್ಷದ ವಿವಿಧ ಹುದ್ದೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ.
ನೇಮಕಾತಿ ಪತ್ರ ವಿತರಣೆ: ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹಾಗೂ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಅವರು ನಗರದಲ್ಲಿ ಅಹಸಾನ್ ಕಮಲ್ ಪರ್ವೇಜ್ ಅವರಿಗೆ ಜಂಟಿಯಾಗಿ ನೇಮಕಾತಿ ಪತ್ರ ವಿತರಿಸಿದರು. ಶಾಸಕ ರಹೀಂಖಾನ್, ವಿಧಾನ ಪರಿಷತ್ ಸದಸ್ಯ ಅರವಿಂದಕುಮಾರ ಅರಳಿ ಹಾಗೂ ಕಾಂಗ್ರೆಸ್ ಪ್ರಚಾರ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net