

ಹಾಸನ: ಭಾರತ್ ಜೋಡೋ ಯಾತ್ರೆ ಒಂದು ವರ್ಷ ತುಂಬಲಿದೆ ನೆನಪಿಗಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಗುರುವಾರ ಜಿಲ್ಲಾ ಕಾಂಗ್ರೆಸ್ ವತಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಪಾದಯಾತ್ರೆ ನಡೆಸಿದರು.
ನಗರದ ಬಿ.ಎಂ. ರಸ್ತೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಿಂದ ಆರಂಭವಾದ ಪಾದಯಾತ್ರೆ ಎನ್.ಆರ್.ವೃತ್ತದಿಂದ, ಹೇಮಾವತಿ ಪ್ರತಿಮೆ, ಮಹಾವೀರ ವೃತ್ತ, ಸುಭಾಷ್ ವೃತ್ತದ ಮೂಲಕ ಮತ್ತೆ ಕಾಂಗ್ರೆಸ್ ಕಚೇರಿಗೆ ಬಂದು ತಲುಪಿದರು. ಈ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರು ಮುಖಂಡರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.
ಜಿಲ್ಲಾಧ್ಯಕ್ಷ ಈ.ಎಚ್. ಲಕ್ಷ್ಮಣ್ ಮಾತನಾಡಿ, ಕಾಂಗ್ರೆಸ್ ಪಕ್ಷದ ಯುವ ನೇತಾರರಾದ ರಾಹುಲ್ ಗಾಂಧಿ ಅವರ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆ ಮೂಲಕ ದೇಶದ ಉದ್ದಗಲಕ್ಕೂ ಆರಂಭಿಸಿ ಯಶಸ್ಸಿಯಾದ ಹಿನ್ನಲೆಯಲ್ಲಿ ಇದರ ಸವಿನೆನಪಿಗಾಗಿ ದೇಶಾದ್ಯಂತ ಎಲ್ಲಾ ಜಿಲ್ಲೆಗಳಲ್ಲಿ ಕೂಡ ಗುರುವಾರ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಾಂಗ್ರೆಸ್ ಪಕ್ಷದ ಅತ್ಯಂತ ಯಶಸ್ವಿ ಕಾರ್ಯಕ್ರಮದಲ್ಲಿ ಈ ಯತ್ರೆ ಪ್ರಮುಖವಾದದ್ದು, ಇದರಿಂದ ಪಕ್ಷಕ್ಕೆ ಹೊಸ ಚೈತನ್ಯ ತಂದುಕೊಡುವುದರ ಜೊತೆಗೆ ಪಕ್ಷದ ಸಂಘಟನೆಗೆ ಹೆಚ್ಚು ಸಹಕಾರಿಯಾಗಿದೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಚುನಾವಣೆ ಪೂರ್ವದಲ್ಲಿ ಹಲವು ಯೋಜನೆಗಳನ್ನು ಘೋಷಣೆ ಮಾಡುವ ಮೂಲಕ ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿದೆ ಎಂದು ಹೇಳಿದರು.
ಈಗ ನಮ್ಮ ಪಕ್ಷ ಅಧಿಕಾರಕ್ಕೆ ಬಂದ ಮೇಲೆ ನುಡಿದಂತೆ ನಡೆದಿದೆ.ಈಗಾಗಲೆ 4 ಭರವಸೆಗಳನ್ನು ಈಡೇರಿಸುವ ಮೂಲಕ ರಾಜ್ಯದ ಜನರ ಮನಸು ಗೆದ್ದೆ ಮುಂದೆ ಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನವನ್ನು ಗೆಲುವ ನಿಟ್ಟಿನಲ್ಲಿ ಎಲ್ಲಾ ಕಾರ್ಯಕರ್ತರು ಶ್ರಮಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಎಚ್‌ಕೆ ಮಹೇಶ್ ಮಹಿಳಾ ಘಟಕದ ಅಧ್ಯಕ್ಷ ತಾರಾ ಚಂದನ್ ಯುವ ಘಟಕದ ಅಧ್ಯಕ್ಷ ರಂಜಿತ್ ಸೇರಿದಂತೆ ಮಂಚೂಣಿ ಘಟಕದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಹಾಜರಿದ್ದರು