ಜಿಲ್ಲಾ ಕಾಂಗ್ರೆಸ್‌ನಿಂದ ವಿವಿಧ ಘಟಕಗಳ ಸಭೆ

2
Published on

ಮೈಸೂರು: ಲೋಕಸಭೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಸಂಬಂಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ವಿವಿಧ ಮುಂಚೂಣಿ ಘಟಕಗಳ ಸಭೆ ಶುಕ್ರವಾರ ನಗರದ ಕಾಂಗ್ರೆಸ್ ಭವನದಲ್ಲಿ ನಡೆಯಿತು.


ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಡಾ.ಬಿ.ಜೆ.ವಿಜಯ್‌ಕುಮಾರ್ ಮಾತನಾಡಿ, ಪಂಚಾಯತ್ ರಾಜ್ ಸಂಘಟನೆಯು ವೈಯಕ್ತಿಕ ಮತ್ತು ಪಕ್ಷದ ಬೆಳವಣಿಗೆಗೆ ಭದ್ರ ಬುನಾದಿಯನ್ನು ಹಾಕಿಕೊಡುವಲ್ಲಿ ಬಹಳ ಪ್ರಮುಖ ಪಾತ್ರ ವಹಿಸುತ್ತದೆ. ಈ ಸಂಘಟನೆಯ ಮೂಲಕ ಪ್ರತಿ ಮನೆ ಬಾಗಿಲಿಗೆ ತಲುಪಲು ಸುಲಭ ಆಗಲಿದೆ. ರಾಜೀವ್‌ಗಾಂಧಿ ಅವರ ಪರಿಕಲ್ಪನೆಯಲ್ಲಿ ಸ್ಥಾಪನೆಯಾದ ಈ ಸಂಘಟನೆ ಬೂತ್ ಮಟ್ಟದಿಂದಲೇ ಪಕ್ಷವನ್ನು ಕಟ್ಟಲು ನೆರವಾಗುತ್ತದೆ ಎಂದು ಹೇಳಿದರು.


ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಅಧ್ಯಕ್ಷ ಮಲ್ಲೇಶ್ ಕೋಟೆ ಮಾತನಾಡಿ, ಮಾಜಿ ಸಂಸದ ದಿ.ಆರ್. ಧ್ರುವನಾರಾಯಣ ಅವರನ್ನು ನೋಡಿ ಪಕ್ಷ ಸಂಘಟನೆಯನ್ನು ಕಲಿಯಬೇಕು. ಮುಂಬರುವ ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಲು ಕಾಂಗ್ರೆಸ್ ನೀಡಿದ ಪಂಚ ಗ್ಯಾರಂಟಿಗಳನ್ನು ಹೆಚ್ಚು ಪ್ರಚಾರ ಮಾಡಬೇಕು. ಈಗಾಗಲೇ ಅನುಷ್ಠಾನ ಆಗಿರುವ 4 ಗ್ಯಾರಂಟಿಗಳನ್ನು ಪ್ರತಿ ಮನೆ ಬಾಗಿಲು ತಲುಪಿಸಬೇಕು ಎಂದು ತಿಳಿಸಿದರು.


ಜಿಲ್ಲಾ ಮಹಿಳಾ ವಿಭಾಗ, ಕಾರ್ಮಿಕ ವಿಭಾಗ, ಅಲ್ಪಸಂಖ್ಯಾತ ಘಟಕದ ಪ್ರಮುಖ ಕಾರ್ಯಕಾರಣಿಯನ್ನು ನಡೆಸಿ ಚರ್ಚೆ ನಡೆಸಿ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net