ಜಿಲ್ಲಾ ನ್ಯಾಯಾಧೀಶರ ವರ್ಗಾವಣೆ

CTD 26 PRESS MEET (2)---0001
Published on

ಚಿತ್ರದುರ್ಗ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ.ಎಸ್.ರೇಖಾ ಅವರು ವರ್ಗಾವಣೆಯಾಗಿದ್ದಾರೆ. ಅವರ ಸ್ಥಾನಕ್ಕೆ ತುಮಕೂ ರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶೆ ಕೆ.ಬಿ.ಗೀತಾ ಅವರನ್ನು ನೇಮಿಸಲಾಗಿದೆ.
ಚಿತ್ರದುರ್ಗ ಪ್ರಧಾನ ಜಿಲ್ಲಾ ನ್ಯಾಯಾಧೀಶರಿಗೆ ನಗರದ ಮುರುಘಾ ಮಠದ ಆಡಳಿತಾಧಿಕಾರಿಯಾಗಿ ಪದನಿಮಿತ್ತ ಹೊಣೆಗಾರಿಕೆ ಕೂ ಡ ಇದೆ. ನ್ಯಾಯಾಧೀಶೆ ಬಿ.ಎಸ್.ರೇಖಾ ಅವರು ಯಾದಗಿರಿ ಜಿಲ್ಲಾ ನ್ಯಾಯಾಲಯಕ್ಕೆ ವರ್ಗಾವಣೆ ಆಗಿದ್ದು, ಅವರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕರ್ತವ್ಯದಲ್ಲಿದ್ದ 9 ನ್ಯಾಯಾಧೀಶರನ್ನು ವರ್ಗಾಯಿಸಿ ಹೈಕೋರ್ಟ್ ನ.9ರಂದು ಆದೇಶಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net