ಜಿಲ್ಲಾ ನ್ಯಾಯಾಲಯ ಸಂಕೀರ್ಣ ಪರಿಶೀಲನೆ

20ydg03
Published on


ಯಾದಗಿರಿ: ನಗರದ ಜಿಲ್ಲಾಡಳಿತ ಭವನದ ಹಿಂಭಾಗದಲ್ಲಿ ನಿರ್ಮಾಣಗೊಳ್ಳುತ್ತಿರುವ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಸೋಮವಾರ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನ್ಯಾಯಾಲಯ ಕಟ್ಟಡ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ ಅವರು, ಕಾಂಪೌಂಡ್, ಸಿಸಿ ರಸ್ತೆ, ಚರಂಡಿ ವ್ಯವಸ್ಥೆ, ವಸತಿ ಗೃಹಗಳಿಗಾಗಿ ಬೇಕಾಗುವ ಅನುದಾನ ಬೇಡಿಕೆ ಪ್ರಸ್ತಾವನೆಯನ್ನು ಸಲ್ಲಿಸಬೇಕು. ಅಗತ್ಯ ಅನುದಾನ ಬಿಡುಗಡೆ ಬಗ್ಗೆ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಹಣ ಬಿಡುಗಡೆ ಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

ಲೋಕೋಪಯೋಗಿ ಇಲಾಖೆ ಇಇ ಕೆ.ಎಸ್.ಅಭಿಮನ್ಯು, ಕಟ್ಟಡ ನಿರ್ಮಾಣಕ್ಕಾಗಿ ೧೫ ಕೋಟಿ ರೂ.ವೆಚ್ಚ ಮಾಡಲಾಗಿದ್ದು, ಸುಮಾರು ೯.೫ ಕೋಟಿ ವೆಚ್ಚದ ಕಾಮಗಾರಿಗಳು ಪ್ರಗತಿಯಲ್ಲಿವೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net