ಜಿಲ್ಲಾ ಪತ್ರಕರ್ತರ ಭವನದಲ್ಲಿ ಎಸ್ಪಿ ಅವರಿಂದ ಧ್ವಜಾರೋಹಣ

ಜಿಲ್ಲಾ ಪತ್ರಕರ್ತರ ಭವನದಲ್ಲಿ ಎಸ್ಪಿ ಅವರಿಂದ ಧ್ವಜಾರೋಹಣ
Published on

ಹಾಸನ: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಪ್ರತಿವರ್ಷದಂತೆ ಈ ವರ್ಷವು ಕೂಡ 78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಹಮ್ಮದ್ ಸುಜೀತಾ ಅವರು ದ್ವಜಾರೋಹಣವನ್ನು ನೆರವೇರಿಸಿ ನಂತರ ಗಾಂಧಿ, ಬಸವ, ಬುದ್ಧ ಹಾಗೂ ಅಂಬೇಡ್ಕರ್ ಭಾವಚಿತ್ರಕ್ಕೆ ಪುಷ್ಪ ಅರ್ಪಿಸಿ ನಮನ ಸಲ್ಲಿಸಿದರು.
ನಂತರ ಮಾತನಾಡಿದ ಅವರು, ನಾವು ಪಡೆದಿರುವ ಸ್ವಾತಂತ್ರ್ಯ ಸಿಗಲು ಅನೇಕ ಮಹನೀಯರು ಹೋರಾಟ ಮಾಡಿದ್ದಾರೆ. ಪ್ರಾಣತ್ಯಾಗ ಮಾಡಿದ್ದಾರೆ. ಅವರ ಬಲಿದಾನದ ಫಲವಾಗಿ ನಮಗೆ ಸ್ವಾತಂತ್ರ್ಯ ಸಿಕ್ಕಿದೆ. ಇದಕ್ಕಾಗಿ ನಾವು ಎಲ್ಲರನ್ನೂ ಸ್ಮರಿಸಿಕೊಳ್ಳಬೇಕು. ಇದರಿಂದ ನಮಗೆ ಜವಾಬ್ದಾರಿ ಹೆಚ್ಚಾಗಿದೆ. ನಾವು ನಮ್ಮ ಸುತ್ತಮುತ್ತ ಇರುವ ಪ್ರತಿಯೊಬ್ಬರ ಏಳಿಗೆ, ಕಲ್ಯಾಣಕ್ಕಾಗಿ ದುಡಿಯೋಣ, ಕಷ್ಟದಲ್ಲಿದ್ದವರಿಗೆ ಸಹಾಯಹಸ್ತ ಚಾಚೋಣ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎಚ್. ವೇಣುಕುಮಾರ್,ಭಾರತ್ ಸೇವಾದಳದ ವಲಯ ಸಂಘಟಕಿ ವಿ.ಎಸ್. ರಾಣಿ, ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಸಿ.ಶಶಿಧರ್, ಉಪಾಧ್ಯಕ್ಷ ಕೆ.ಎಂ. ಹರೀಶ್, ಮಾಜಿ ಅಧ್ಯಕ್ಷೆ ಲೀಲಾವತಿ, ಉದಯಕುಮಾರ್, ಎಸ್.ಆರ್. ಪ್ರಸನ್ನಕುಮಾರ್, ಅತೀಖುರ್ ರೆಹಮಾನ್, ಕಾರ್ಯಕಾರಿ ಸಮಿತಿ ಸದಸ್ಯರು ಇತರೆಉ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net