ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಸ್ಥಳಾಂತರ

Published on

ಚಾಮರಾಜನಗರ: ನಗರದ ಜಿಲ್ಲಾಡಳಿತ ಭವನದಲ್ಲಿದ್ದ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯು ಪ್ರಗತಿನಗರದಲ್ಲಿರುವ ನೂತನ ಸ್ವಂತ ಕಟ್ಟಡಕ್ಕೆ ಸ್ಥಳಾಂತರಗೊಂಡಿದೆ.

ನಗರದಲ್ಲಿರುವ ಪ್ರಗತಿ ನಗರದ ಮಹಾವೀರ ಡಿವೈನ್ ಸಿಟಿಯ 3ನೇ ಮಹಡಿಯಲ್ಲಿ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಕಚೇರಿ ಸಂಕೀರ್ಣಕ್ಕೆ ಸ್ಥಳಾಂತರಗೊಂಡಿದೆ. ಮುಂದಿನ ದಿನಗಳಲ್ಲಿ ಪರಿಶಿಷ್ಟ ಪಂಗಡದ ಸಮುದಾಯದವರು ಹಾಗೂ ಸಾರ್ವಜನಿಕರು ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳನ್ನು ಈ ವಿಳಾಸದಲ್ಲಿ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net