

ಬೀದರ್: ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಇದೇ 10ರಂದು ಬೆಳಗ್ಗೆ 9ಕ್ಕೆ ಇಲ್ಲಿನ ನೌಬಾದ್ ಹತ್ತಿರದ ಪಕ್ಷದ ಜಿಲ್ಲಾ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ರಾಜ್ಯ ಪ್ರಧಾನ ಕಾರ್ಯದರ್ಶಿ, ಎಂಎಲ್ಸಿ ಎನ್.ರವಿಕುಮಾರ, ಕೇಂದ್ರದ ರಾಸಾಯನಿಕ ಮತ್ತು ರಸಗೊಬ್ಬರ ಖಾತೆ ರಾಜ್ಯ ಸಚಿವ ಭಗವಂತ ಖೂಬಾ ಹಾಗೂ ಜಿಲ್ಲೆಯ ಚುನಾಯಿತ ಪ್ರತಿನಿಗಳು, ಪದಾಧಿಕಾರಿಗಳು, ಅಪೇಕ್ಷಿತರು ಪಾಲ್ಗೊಳ್ಳಲಿದ್ದಾರೆ ಎಂದು ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್ ತಿಳಿಸಿದ್ದಾರೆ.