

ಯಾದಗಿರಿ: ಸಂಸತ್ ಕಲಾಪದಿಂದ ಸಂಸದರನ್ನು ಉಚ್ಛಾಟಿಸಿದ್ದನ್ನು ಪ್ರತಿಪಕ್ಷ ಸಂಸದರು ಖಂಡಿಸಿದ್ದಲ್ಲದೆ, ತೃಣಮೂಲ ಕಾಂಗ್ರೆಸ್ ಸಂಸದ ಕಲ್ಯಾಣ ಬ್ಯಾನರ್ಜಿ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಬಗ್ಗೆ ಅಣುಕು ಪ್ರದರ್ಶನ ಮಾಡಿದ್ದನ್ನು ಖಂಡಿಸಿ ಗುರುವಾರ ನಗರದ ಸುಭಾಷ್ ವೃತ್ತದ ಬಳಿ ಜಿಲ್ಲಾ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾ ಪ್ರಧಾನ ಕಾರ್ಯದಶರ್ಿ ವೆಂಕಟರಡ್ಡಿ ಅಬ್ಬೆತುಮಕೂರು ಮಾತನಾಡಿ, ಸಂಸತ್ತಿನ ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ 92 ಪ್ರತಿಪಕ್ಷಗಳ ಸಂಸದರನ್ನು ಅಮಾನತುಗೊಳಿಸಿದ್ದನ್ನು ಖಂಡಿಸಿ ಕಳೆದ ಮೂರು ದಿನಗಳ ಹಿಂದೆ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆನೇತೃತ್ವದಲ್ಲಿ ಸಂಸತ್ ಆವರಣದ ಮಹಾತ್ಮ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ವಿಪಕ್ಷಗಳು ಪ್ರತಿಭಟನೆ ನಡೆಸಿದ ವೇಳೆ ಸಂಸದ ಕಲ್ಯಾಣ್ ಬ್ಯಾನರ್ಜಿ, , ರಾಜ್ಯಸಭಾ ಅಧ್ಯಕ್ಷ ಜಗದೀಪ್ರನ್ನು ಅಣಕಿಸುವ ಮೂಲಕ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿದರು.
ಸಂಸತ್ತನ್ನು ಪ್ರಜಾಪ್ರಭುತ್ವದ ದೇಗುಲ ಎಂದು ಕರೆಯಲಾಗುತ್ತದೆ. ದೇಶದ ಉಪ ರಾಷ್ಟ್ರಪತಿಗಳೂ ಆದ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಅವರು ಹಿರಿಯರು. ಅವರ ಬಗ್ಗೆ ಕಿಂಚಿತ್ತೂ ಗೌರವವಿಲ್ಲದಂತೆ ವಿಪಕ್ಷಗಳು ನಡೆದುಕೊಂಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಹರಿ ಹಾಯ್ದರು.
ಕೇಂದ್ರದಲ್ಲಿ ಬಿಜೆಪಿ ಉತ್ತಮ ಆಡಳಿತ ನೀಡುತ್ತಿದೆ. ಲೋಕಸಭೆಗೆ ಮತ್ತೆ ಚುನಾವಣೆ ಎದುರಾಗುತ್ತಿದ್ದು, ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲಿದ್ದಾರೆ ಎಂಬುದು ಕಾಂಗ್ರೆಸ್ ಸೇರಿ ವಿಪಕ್ಷಗಳಿಗೆ ಮನವರಿಕೆಯಾಗಿದೆ. ಹೀಗಾಗಿ ಅಧಿವೇಶನದಲ್ಲಿ ಕಲಾಪ ನಡೆಯದಂತೆ ಈ ರೀತಿ ಅಡ್ಡಿಪಡಿಸಲಾಗುತ್ತಿದೆ. ಸಂಸತ್ತಿನ ಬಗ್ಗೆ ವಿಪಕ್ಷಗಳಿಗೆ ಗೌರವವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.