ಜಿಲ್ಲಾ ಮಟ್ಟಕ್ಕೆ ಆಯ್ಕೆ

20arsph2ep,,,,
????????????
Published on


ಅರಸೀಕೆರೆ: ಇತ್ತೀಚೆಗೆ ಮುಕ್ತಾಯಗೊಂಡ ಅರಸೀಕೆರೆ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಕ್ರೀಡಾಕೂಟದಲ್ಲಿ ನಗರದ ಅನಂತ್ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಶಟಲ್ ಬ್ಯಾಡ್ಮಿಂಟನ್ ಸಿಂಗಲ್ಸ್, ಡಬಲ್ಸ್ ಮತ್ತು ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.ಬಾಲಕಿಯರ ವಿಭಾಗದಲ್ಲಿ ವಾಲಿಬಾಲ್ ಹಾಗೂ ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಜೇತ ವಿದ್ಯಾರ್ಥಿಗಳು ಟ್ರೋಫಿ ಹಾಗೂ ಪ್ರಮಾಣ ಪತ್ರದೊಂದಿಗೆ ಸಂಭ್ರಮಿಸಿದ ವೇಳೆ ಆರ್.ಅನಂತಕುಮಾರ್, ಪ್ರಾಂಶುಪಾಲ ಸುರೇಶ್ ಕುಂದೂರ್, ದೈಹಿಕ ಶಿಕ್ಷಣ ಶಿಕ್ಷಕ ಗಿರೀಶ್, ಉಪನ್ಯಾಸಕರಾದ ಸುಭಾಷ್, ಎಂ.ಆರ್.ಲೋಕೇಶ್, ಹಾಲಪ್ಪ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net