ಜಿಲ್ಲಾ ಮಟ್ಟಕ್ಕೆ ಗುಬ್ಬಿಗಾ ಶಾಲೆ ಮಕ್ಕಳು

nrp school
ಸ್ಪರ್ಧೆಯಲ್ಲಿ ವಿಜೇತರಾದ ಗುಬ್ಬಿಗಾ ಸರ್ಕಾರಿ ಶಾಲೆ ಮಕ್ಕಳನ್ನು ಶಿಕ್ಷಕಿ ಶೈನಿ ಅಭಿನಂದಿಸಿದರು.
Published on

ಎನ್.ಆರ್.ಪುರ: ಬಸ್ತಿಮಠದಲ್ಲಿ ಧರ್ಮಸ್ಥಳದ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಿಂದ ಶನಿವಾರ ಮೌಲ್ಯಾಧಾರಿತ ಪುಸ್ತಕಗಳಿಗೆ ಸಂಬಂಧಿಸಿದಂತೆ ನಡೆದ 4 ಸ್ಪರ್ಧೆಗಳಲ್ಲಿ ಗುಬ್ಬಿಗಾ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆ ಮುಖ್ಯಶಿಕ್ಷಕ ಅಶೋಕ್ ತಿಳಿಸಿದ್ದಾರೆ.

ಪ್ರಬಂಧ ಸ್ಪರ್ಧೆಯಲ್ಲಿ ಸಂಜನಾ ಪ್ರಥಮ ಸ್ಥಾನ, ಶ್ಲೋಕ ವಾಚನ ಸ್ಪರ್ಧೆಯಲ್ಲಿ ಪ್ರಿಯಾಂಕಾ ಪ್ರಥಮ, ಚಿತ್ರಬಿಡಿಸುವ ಸ್ಪರ್ಧೆಯಲ್ಲಿ ಅನ್ನಾ ಕ್ಯಾತ್ರಿನಾ ಪ್ರಥಮ, ಭಾಷಣ ಸ್ಪರ್ಧೆಯಲ್ಲಿ ಅನ್ನಾ ಕ್ರಿಸ್ಟೀನಾ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಮಕ್ಕಳಿಗೆ ಹಾಗೂ ತರಬೇತಿ ನೀಡಿದ ಶಿಕ್ಷಕಿ ಶೈನಿ, ಶಿಕ್ಷಕ ಶ್ರೀನಿವಾಸ್ ಅವರಿಗೆ ಗುಬ್ಬಿಗಾ ಗ್ರಾಪಂ ಅಧ್ಯಕ್ಷೆ ನಾಗರತ್ನ್ನಾ, ಉಪಾಧ್ಯಕ್ಷ ಶಂಕರ್, ಎಸ್‌ಡಿಎಂಸಿ ಅಧ್ಯಕ್ಷ ಚಂದ್ರಶೇಖರ್, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮಧು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net