ಜಿಲ್ಲಾ ಮಟ್ಟದ ಕವಿಗೋಷ್ಠಿಗೆ ಆಹ್ವಾನ

Untitled--0005
Published on

ಚಿತ್ರದುರ್ಗ: ಜಿಲ್ಲಾಡಳಿತ ಹಾಗೂ ಕಸಾಪ ಜಿಲ್ಲಾ ಶಾಖೆ ಆಶ್ರಯದಲ್ಲಿ ಜುಲೈ 2ರಂದು ಫ.ಗು.ಹಳಕಟ್ಟಿ ಅವರ ಜನ್ಮದಿನವನ್ನು ಡಿಸಿ ಕಚೇರಿಯಲ್ಲಿ ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಉಪನ್ಯಾಸ ಮತ್ತು ಜಿಲ್ಲಾ ಮಟ್ಟದ ಕವಿಗೋಷ್ಠಿ ಏರ್ಪಡಿಸಲಾಗಿದೆ. ಫ.ಗು.ಹಳಕಟ್ಟಿ ಅವರ ಬದುಕು, ಬರಹ ಮತ್ತು ವಚನ ಸಾಹಿತ್ಯ ವಿಷಯಕ್ಕೆ ಸಂಬಂಧಿಸಿದಂತೆ ಕವನಗಳನ್ನು ವಾಚಿಸಲು ಅವಕಾಶವಿದೆ. ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಬಹುಮಾನ ಮತ್ತು ಪ್ರಶಂಸಾ ಪತ್ರ ನೀಡಲಾಗುವುದು. ಆಸಕ್ತರು ಜೂ.25 ರೊಳಗೆ ಕವನಗಳನ್ನು ಮೊಬೈಲ್ ಸಂಖ್ಯೆಗೆ 9449510078, 9538418943 ವಾಟ್ಸ್‌ಆ್ಯಪ್ ಮಾಡುವಂತೆ ಕಸಾಪ ಜಿಲ್ಲಾಧ್ಯಕ್ಷ ಕೆ.ಎಂ.ಶಿವಸ್ವಾಮಿ ಕೋರಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net