ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

11ss1Boys team ayke
Published on

ಶನಿವಾರಸಂತೆ: ಇತ್ತೀಚೆಗೆ ಕೂಡಿಗೆಯಲ್ಲಿ ನಡೆದ 2025-26ನೇ ಸಾಲಿನ ಪ್ರಾಥಮಿಕ ಶಾಲೆಗಳ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದ ಸಮೀಪದ ಆಲೂರು ಸಿದ್ದಾಪುರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯ ಬಾಲಕರು ವಿವಿಧ ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕ ಎಚ್.ಪಿ.ಕರುಂಬಯ್ಯ ಮತ್ತು ಶಾಲಾ ಮುಖ್ಯಶಿಕ್ಷಕ ಉದಯ್‌ಕುಮಾರ್ ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net