

ಯಾದಗಿರಿ: ರಾಜ್ಯ ಸಕರ್ಾರದ ಮಹತ್ವಾಕಾಂಕ್ಷಿ ಜನತಾ ದರ್ಶನ ಕಾರ್ಯಕ್ರಮ ಸೆ.25 (ಸೋಮವಾರ)ರಂದು ನಗರದ ಡಾ.ಬಾಬು ಜಗಜೀವನರಾಮ್ ಭವನದಲ್ಲಿ ಜಿಲ್ಲಾಡಳಿತದಿಂದ ಆಯೋಜಿಸಲಾಗಿದ್ದು, ಸಕಲ ಸಿದ್ಧತೆ ಪೂರ್ಣಗೊಂಡಿದೆ.
ಜಿಲ್ಲಾ ಮಟ್ಟದ ಕಾರ್ಯಕ್ರಮ ಇದಾಗಿದ್ದು, ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಉದ್ಘಾಟಿಸಿ, ಸಾರ್ವಜನಿಕರಿಂದ ಅಜರ್ಿ ಅಹವಾಲು ಸ್ವೀಕರಿಸಲಿದ್ದಾರೆ. ಬೆಳಗ್ಗೆ 9ರಿಂದ ಸಂಜೆ 5ರ ವರೆಗೆ ನಡೆಯಲಿದ್ದು, ಸ್ಥಳದಲ್ಲೇ ಜನರ ಸಮಸ್ಯೆಗಳ ಇತ್ಯರ್ಥಕ್ಕೆ ಸಕಲ ಕ್ರಮ ಕೈಗೊಳ್ಳಲಾಗಿದೆ. ಆಯುಷ್ಮಾನ್ ಭಾರತ ಯೋಜನೆಯಡಿಯ ಅಜರ್ಿಗಳನ್ನು ಸ್ವೀಕರಿಸುವ ವಿಧಾನ, ಅವಶ್ಯಕ ದಾಖಲಾತಿಗಳ ಬಗ್ಗೆ ಆಯಾ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳ ಮೂಲಕ ನಾಗರಿಕರಲ್ಲಿ ಸೂಕ್ತ ಅರಿವು ಮೂಡಿಸಲಾಗುತ್ತಿದೆ. ಜತೆಗೆ ಜನತಾ ದರ್ಶನದಲ್ಲಿ 6 ಪ್ರತ್ಯೇಕ ಕೌಂಟರ್ ತೆರೆಯಲಾಗಿದೆ. ಇದರಲ್ಲಿ ಯಾವುದೇ ಲೋಪಕ್ಕೆ ಅವಕಾಶ ನೀಡದೆ ನುರಿತ ಡಾಟಾ ಎಂಟ್ರಿ ಆಪರೇಟರ್, ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಲಾಗಿದೆ.
ಸಾರ್ವಜನಿಕ ಕುಂದುಕೊರತೆ ನಿವಾರಣಾ ವ್ಯವಸ್ಥೆ (ಐಪಿಜಿಆರ್ಎಸ್) ಪೋರ್ಟಲ್ದಲ್ಲಿ ನೋಂದಣಿ ಮಾಡಿಸಲಾಗುತ್ತದೆ. ಅಧಿಕಾರಿಗಳು ಸ್ವೀಕರಿಸುವ ಅಜರ್ಿಗಳ ಮೇಲೆ ಅವಶ್ಯಕ ಕ್ರಮಕೈಗೊಳ್ಳಲು ಪೂರ್ವಭಾವಿ ಸಿದ್ಧತೆ ಮಾಡಿಕೊಂಡಿದ್ದಾರೆ. ಇದರ ಜತೆಗೆ ಹಲವು ವರ್ಷಗಳಿಂದ ಇತ್ಯರ್ಥಗೊಳ್ಳದೇ ಬಾಕಿ ಉಳಿದಿರುವ ಅಜರ್ಿಗಳ ವಿಲೇವಾರಿ ಕುರಿತು ಆದ್ಯತೆ ಮೇರೆಗೆ ಗಮನ ನೀಡಲಾಗುತ್ತಿದೆ.
ಜನತಾ ದರ್ಶನಕ್ಕೆ ಆಗಮಿಸುವ ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ಮಧ್ಯಾಹ್ನದ ಊಟ ಹಾಗು ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನು ಮುಂದೆ ಪ್ರತಿ 15 ದಿನಗಳಿಗೊಮ್ಮೆ ತಾಲೂಕುವಾರು ಕಾರ್ಯಕ್ರಮ ನಡೆಯಲಿದೆ.