ಜಿಲ್ಲಾ ಮಟ್ಟದ ಪ್ರಶಸ್ತಿಗೆ ಅರ್ಜಿ ಆಹ್ವಾನ

174-1741366_school-admission-open-png-transparent-png
Published on

ಕಲಬುರಗಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ೨೦೨೩-೨೪ನೇ ಸಾಲಿನ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿಗಾಗಿ (ನಾವಿನ್ಯತೆ, ತಾರ್ಕಿಕ, ಕ್ರೀಡೆ, ಕಲೆ, ಸಾಂಸ್ಕೃತಿಕ ಹಾಗೂ ಸಂಗೀತ ಕ್ಷೇತ್ರ) ಅರ್ಜಿ ಆಹ್ವಾನಿಸಲಾಗಿದೆ ಎಂದು ಇಲಾಖೆ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ. ಅರ್ಹರು ದ್ವಿಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿಯೊಂದಿಗೆ ವಿವಿಧ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ ಮಾಡಿದ ಬಗ್ಗೆ ಪತ್ರಿಕಾ ವರದಿ ಮತ್ತು ಇತರೆ ದಾಖಲೆ, ಮಗುವಿನ ಭಾವಚಿತ್ರ, ಜನ್ಮ ದಿನಾಂಕ ಬಗ್ಗೆ ಶಾಲೆಯಿಂದ ಪಡೆದ ಪ್ರಮಾಣಪತ್ರ, ಇತರೆ ಪ್ರಶಸ್ತಿ ಪಡೆದಿದ್ದಲ್ಲಿ ದಾಖಲೆ ಹಾಗೂ ರಾಷ್ಟಿಕೃತ ಬ್ಯಾಂಕ್ ಖಾತೆಯ ಪಾಸ್‌ಬುಕ್ ನಕಲು ಪ್ರತಿ ಲಗತ್ತಿಸಿ ಸೆಪ್ಟೆಂಬರ್ ೨೬ರ ಸಂಜೆ ೫.೩೦ರೊಳಗೆ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚಂದ್ರಶೇಖರ ಪಾಟೀಲ್ ಕ್ರೀಡಾಂಗಣ ಎದುರು, ಸರ್ಕಾರಿ ಅಂಧ ಬಾಲಕರ ಪ್ರೌಢ ಶಾಲೆ ಕಟ್ಟಡ, ಕಲಬುರಗಿ ಕಚೇರಿಯಲ್ಲಿ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಕಲಬುರಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ದೂರವಾಣಿ ಸಂಖ್ಯೆ: ೦೮೪೭೨-೨೭೮೬೫೯ ಗೆ ಸಂಪರ್ಕಿಸಲು ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net