

ಬೀದರ್: ಜಿಲ್ಲಾ ಕೇಂದ್ರ ಬೀದರ್ನಲ್ಲಿ ಜಿಲ್ಲಾ ಸರ್ಕಾರಿ ಕಚೇರಿಗಳ ಸಂಕೀರ್ಣ ನಿರ್ಮಾಣ ಕಾರ್ಯ ಬೇಗ ಆರಂಭಿಸಬೇಕು ಎಂದು ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಆಗ್ರಹಿಸಿದ್ದಾರೆ.
ಈ ಹಿಂದೆ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ ಸಂಕೀರ್ಣ ನಿರ್ಮಾಣಕ್ಕಾಗಿ 48 ಕೋಟಿ ರೂ. ಹಣ ಬಿಡುಗಡೆಗೊಳಿಸಿ ಶಂಕುಸ್ಥಾಪನೆ ಮಾಡಿದರು. ಈವರೆಗೆ ಕಾಮಗಾರಿ ಆರಂಭಿಸಿಲ್ಲ. ಹೀಗಾಗಿ ತಕ್ಷಣ ಕಾಮಗಾರಿ ಆರಂಭಕ್ಕೆ ಚಾಲನೆ ನೀಡಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಬೀದರ್ ಉತ್ಸವದ ಹೆಸರಿನಲ್ಲಿ ಗುತ್ತಿಗೆದಾರರು, ವ್ಯಾಪಾರಿಗಳು, ಸಾರ್ವಜನಿಕರು, ಸರ್ಕಾದ ವಿವಿಧ ಇಲಾಖೆಗಳಿಂದ ಸಾಕಷ್ಟು ಹಣ ಸಂಗ್ರಹಿಸಿದ್ದಾರೆ. ಇದರಲ್ಲಿ ಅವ್ಯವಹಾರ ನಡೆದಿದೆ. ಈ ಸಂಬಂಧ ಸಿಬ್ಬಂದಿ ಆಡಳಿತ ಸುಧಾರಣಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಅವರಿಗೆ ದೂರು ಸಲ್ಲಿಸಲಾಗಿದೆ ಎಂದು ಹೇಳಿದರು. ಮುಖಂಡರಾದ ರಾಜಶೇಖರ ನಾಗಮೂರ್ತಿ, ಜಗದೀಶ್ವರ ಬಿರಾದಾರ್ ಇದ್ದರು.