

ಯಾದಗಿರಿ:ಜಿಲ್ಲಾಡಳಿತದಿಂದ ಶ್ರೀಕೃಷ್ಣ ಜಯಂತಿಯನ್ನು ಅರ್ಥಪೂರ್ಣ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಕಾರಿ ಶರಣಬಸಪ್ಪ ಕೋಟೆಪ್ಪಗೋಳ ತಿಳಿಸಿದ್ದಾರೆ.
ನಗರದ ಜಿಲ್ಲಾಕಾರಿ ಕಚೇರಿ ಸಭಾಂಗಣದಲ್ಲಿ ಜಯಂತಿ ಅಂಗವಾಗಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಸೆ.06ರಂದು ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಜಿಲ್ಲಾಮಟ್ಟದ ಕಾರ್ಯಕ್ರಮ ನಡೆಯಲಿದೆ. ಅಕಾರಿಗಳಿಗೆ ವಹಿಸಲಾದ ಕೆಲಸ-ಕಾರ್ಯಗಳನ್ನು ಅಚ್ಚುಕಟ್ಟಾಗಿ, ಯಾವುದೇ ಲೋಪ ಆಗದಂತೆ ನಿಭಾಯಿಸಬೇಕು. ಶಿಷ್ಠಾಚಾರದಂತೆ ಅತಿಥಿ,ಗಣ್ಯರನ್ನು, ನುರಿತ ಉಪನ್ಯಾಸಕರನ್ನು ಆಹ್ವಾನಿಸುವುದು ಸೇರಿ ಎಲ್ಲ ರೀತಿಯ ಸೌಕರ್ಯ ಒದಗಿಸಬೇಕು ಎಂದು ಅಕಾರಿಗಳಿಗೆ ನಿದರ್ೇಶನ ನೀಡಿದರು.
ಅದೇ ರೀತಿ ವೇದಿಕೆ, ಕುಡಿಯುವ ನೀರು, ವಿದ್ಯುತ್, ಅಲಂಕಾರ, ಧ್ವನಿವರ್ಧಕ, ಸ್ವಚ್ಛತೆ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಬೇಕು. ಕಾರ್ಯಕ್ರಮಕ್ಕೆ ಜಿಲ್ಲಾಮಟ್ಟದ ಎಲ್ಲ ಅಕಾರಿಗಳು ಕಡ್ಡಾಯವಾಗಿ ಹಾಜರಾಗಬೇಕು. ತಾಲೂಕು ಮಟ್ಟದಲ್ಲಿ ಶಾಲಾ ಕಾಲೇಜು, ವಿವಿಧ ಕಚೇರಿಗಳಲ್ಲಿ ಜಯಂತಿ ಅರ್ಥಪೂರ್ಣವಾಗಿ ಆಚರಿಸಬೇಕು. ಜಿಲ್ಲಾ ಕೇಂದ್ರ ಸ್ಥಾನದಲ್ಲಿ ಆಯಾ ಸಂಘಟನೆಗಳಿಂದ ಏರ್ಪಡಿಸಲಾಗುವ ಮೆರವಣಿಗೆ, ಮಾರ್ಗದ ಕುರಿತು ಪೂರ್ವಭಾವಿಯಾಗಿ ಸಂಬಂಸಿದ ಇಲಾಖೆಗೆ ತಿಳಿಸಬೇಕು ಎಂದರು.