ಜಿಲ್ಲಾಡಳಿತದಿಂದ ಜಯಂತಿ ಆಚರಣೆ

bkt-2-2
ಬಾಗಲಕೋಟೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿ ಮಹಾತ್ಮ ಗಾಂಽ ಜಯಂತಿ ಹಾಗೂ ಲಾಲಬಹದ್ದೂರ ಶಾಸ್ತ್ರೀಯವರ ಜನ್ಮ ದಿನಾಚರಣೆ ಆಚರಿಸಲಾಯಿತು. ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಎಚ್.ವೈ.ಮೇಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆಣ್ಣವರ, ಜಿಲ್ಲಾಽಕಾರಿ ಕೆ.ಎಂ.ಜಾನಕಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ, ಅಪರ ಜಿಲ್ಲಾಽಕಾರಿ ಪರಶುರಾಮ ಶಿನ್ನಾಳಕರ ಇತರರು ಇದ್ದರು.
Published on

ಬಾಗಲಕೋಟೆ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ಗಾಂಽ ಜಯಂತಿ ಹಾಗೂ ಲಾಲಬಹದ್ದೂರ ಶಾಸ್ತ್ರೀಯವರ ಜನ್ಮ ದಿನಾಚರಣೆಯನ್ನು ಜಿಲ್ಲಾಡಳಿತದ ಮುಖ್ಯದ್ವಾರದಲ್ಲಿ ಬುಧವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಜಿಲ್ಲಾಡಳಿತ ಭವನದ ಮುಖ್ಯ ದ್ವಾರದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ, ಶಾಸಕ ಎಚ್.ವೈ.ಮೇಟಿ, ವಿಧಾನ ಪರಿಷತ್ ಸದಸ್ಯ ಪಿ.ಎಚ್.ಪೂಜಾರ, ನಗರಸಭೆ ಅಧ್ಯಕ್ಷೆ ಸವಿತಾ ಲೆಂಕೆಣ್ಣವರ, ಜಿಲ್ಲಾಽಕಾರಿ ಕೆ.ಎಂ.ಜಾನಕಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಶಶಿಧರ ಕುರೇರ, ಅಪರ ಜಿಲ್ಲಾಽಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಉಪ ಕಾರ್ಯದರ್ಶಿ ಎನ್.ವೈ.ಬಸರಿಗಿಡದ ಸೇರಿದಂತೆ ಇತರರು ಗಾಂಽ ಹಾಗೂ ಶಾಸ್ತ್ರೀಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಗೈದು ನಮನ ಸಲ್ಲಿಸಿದರು.

ವಿವಿಧ ಧರ್ಮದ ಗುರುಗಳಾದ ಸಂಸ್ಕೃತ ಪಂಡಿತ ಬಿಂಧುಮಾಧವಾಚಾರ್ಯ ನಾಗಸಂಪಗಿ ಭಗವದ್ಗೀತಾ, ಆಸೀಫ್ ಎಲ್. ಮುದಗಲ್ಲ ಕುರಾನ ಹಾಗೂ ಅಗ್ನೆಲ್ ಫಾದರ್ ಬೈಬಲ್ ಕುರಿತು ಪಠಣ ಮಾಡಿದರು. ಬಸವೇಶ್ವರ ಕಲಾ ಮಹಾವಿದ್ಯಾಲಯದ ಡಾ.ಆರ್.ಎಂ.ಬೆಣ್ಣೂರ ಮತ್ತು ಸಂಗೀತ ವಿಭಾಗದ ವಿದ್ಯಾರ್ಥಿಗಳಿಂದ ಸರ್ವಧರ್ಮ ಪ್ರಾರ್ಥನೆ ಮತ್ತು ವೈಷ್ಣವ ಜನತೋತನೆ, ರಘುಪತಿ ರಾಘವ ರಾಜಾರಾಮ ಗೀತೆ ಹಾಡಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಕಾರಿ ಪರಶುರಾಮ ಶಿನ್ನಾಳಕರ ಸ್ವಚ್ಛತಾ ಕುರಿತು ಪ್ರತಿಜ್ಞಾವಿಽ ಬೋಽಸಿದರು.

ಕಾರ್ಯಕ್ರಮದಲ್ಲಿ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ವಿವೇಕಾನಂದ, ಹಿಂದುಳಿದ ವರ್ಗಗಳ ಕಲ್ಯಾಣಾಽಕಾರಿ ಎಂ.ಎಂ.ತುಂಬರಮಟ್ಟಿ, ಎನ್.ಐಸಿಯ ಗಿರಿಯಾಚಾರ, ಅಲ್ಪಸಂಖ್ಯಾತರ ಇಲಾಖೆಯ ಜಿಲ್ಲಾ ಅಽಕಾರಿ ಶಿವಾನಂದ ಪಟ್ಟಣಶೆಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ಕೆ.ಪ್ರಭಾಕರ, ಜಿಲ್ಲಾ ವಾರ್ತಾಽಕಾರಿ ಕಸ್ತೂರಿ ಪಾಟೀಲ ಸೇರಿದಂತೆ ವಿವಿಧ ಇಲಾಖೆಯ ಅಽಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಶಿಕ್ಷಣ ಇಲಾಖೆಯ ಸಂಗಮೇಶ ಸಣ್ಣತಂಗಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net