

ಬಾಗಲಕೋಟೆ: ಜಿಲ್ಲಾಡಳಿತದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ ಪರಿನಿರ್ವಾಹಣಾ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಡಾ.ಬಿ.ಆರ್.ಅಂಬೇಡ್ಕರ ಪುತ್ಥಳಿಗೆ ಜಿ.ಪಂ ಸಿಇಓ ಶಶೀಧರ ಕುರೇರ, ಅಪರ ಜಿಲ್ಲಾಧಿಕಾರಿ ಪರಶುರಾಮ ಶಿನ್ನಾಳಕರ, ಜಿ.ಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ ಅವರು ಮಾಲಾರ್ಪಣೆ ಮಾಡಿ ಪುಷ್ಪ ಅರ್ಪಿಸಿದರು.
ಈ ಸಂದರ್ಭದಲ್ಲಿ ಜಿ.ಪಂ ಮುಖ್ಯ ಯೋಜನಾಧಿಕಾರಿ ಪುನಿತ್, ಯೋಜನಾಧಿಕಾರಿ ಎನ್.ವಾಯ್.ಬಸರಿಗಿಡದ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಮರಟ್ಟಿ, ಜಿ.ಪಂ ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮ ಉಕ್ಕಲಿ, ಪಶು ಇಲಾಖೆಯ ಉಪನಿರ್ದೇಶಕ ಎಸ್.ಎಚ್.ಕರಡಿಗುಡ್ಡ, ಜಿಲ್ಲಾ ಆಯುಷ ಅಧಿಕಾರಿ ಅಕ್ಕಮಹಾದೇವಿ ಗಾಣಿಗೇರ, ಜಿ.ಪಂ ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ನಗರಸಭೆ ಪೌರಾಯುಕ್ತ ರಮೇಶ ಜಾದವ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.