ಜಿಲ್ಲಾಧಿಕಾರಿ ಯಶವಂತ್ ಅಧಿಕಾರ ಸ್ವೀಕಾರ

DC8
Published on

ರಾಮನಗರ : ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಯಶವಂತ್ ವಿ.ಗುರುಕರ್ ಭಾನುವಾರ ಅಧಿಕಾರ ಸ್ವೀಕರಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿದರು.

ಶನಿವಾರ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಕಳೆದ ಒಂದು ವರ್ಷಕ್ಕೂ ಹೆಚ್ಚು ಕಾಲ ರಾಮನಗರ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಅವಿನಾಶ್ ಮೆನನ್ ರಾಜೇಂದ್ರನ್ ಅವರನ್ನು ಬಿಬಿಎಂಪಿ ವಿಶೇಷ ಆಯುಕ್ತರ ಹುದ್ದೆಗೆ ವರ್ಗಾವಣೆ ಮಾಡಿ, ಸ್ಮಾರ್ಟ್ ಗೌರ‌್ನೆನ್ಸ್‌ನ ಕಾರ್ಯಕಾರಿ ನಿರ್ದೇಶಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಯಶವಂತ ವಿ.ಗುರುಕರ್ ಅವರನ್ನು ರಾಮನಗರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಿತ್ತು. ಇವರು ಈ ಹಿಂದೆ ಕಲಬುರಗಿಯಲ್ಲಿ ಸೇವೆ ಸಲ್ಲಿಸಿದ್ದರು.

ಅಧಿಕಾರಿ ಸ್ವೀಕಾರ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿಗ್ವಿಜಯ್ ಬೊಡ್ಕೆ, ಎಡಿಸಿ ಬಿ.ಸಿ.ಶಿವಾನಂದ ಮೂರ್ತಿ, ರಾಮನಗರ ಉಪವಿಭಾಗಧಿಕಾರಿ ಬಿನೋಯ್ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net