ಜಿಲ್ಲಾಧ್ಯಕ್ಷರಾಗಿ ಕೂಡಿಗೆ ಹಮೀದ್ ನೇಮಕ

Published on

ಕುಶಾಲನಗರ: ಅಸಂಘಟಿತ ಕಾರ್ಮಿಕರ ಮತ್ತು ನೌಕರರ ವಿಭಾಗದ ಕೊಡಗು ಜಿಲ್ಲಾ ಅಧ್ಯಕ್ಷರನ್ನಾಗಿ ಕೂಡಿಗೆ ಗ್ರಾಮ ಪಂಚಾಯಿತಿ ಸದಸ್ಯ ಟಿ.ಪಿ.ಹಮೀದ್ ಅವರನ್ನು ನೇಮಕ ಮಾಡಲಾಗಿದೆ.


ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶದ ಮೇರೆಗೆ ಅಖಿಲ ಭಾರತ ಅಸಂಘಟಿತ ಕಾರ್ಮಿಕರ ಮತ್ತು ನೌಕರರ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಡಾ.ಉದಿತ್ ರಾಜ್ ನೇಮಕ ಮಾಡಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net