ಜಿಲ್ಲಾಮಟ್ಟದ ಪ್ರಶಸ್ತಿಗೆ ಆಯ್ಕೆ ಸಭೆ

IMG20231110164153--002
Published on

ಚಿತ್ರದುರ್ಗ: ಅಸಾಧಾರಣ ಸಾಧನೆ ಮಾಡಿರುವಂಥ ಮಕ್ಕಳಿಗೆ ಜಿಲ್ಲಾ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದ್ದು,ಇದಕ್ಕಾಗಿ ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಅವರ ಅಧ್ಯಕ್ಷತೆಯಲ್ಲಿ ಜಿಪಂದಲ್ಲಿ ಶುಕ್ರವಾರ ಆಯ್ಕೆ ಸಮಿತಿ ಸಭೆ ಜರುಗಿತು. 2023ನೇ ಸಾಲಿಗೆ ನಾವಿನ್ಯತೆ, ತಾರ್ಕಿಕ ಸಾಧನೆ ಗಳು, ಕ್ರೀಡೆ ಹಾಗೂ ಕಲೆ, ಸಾಂಸ್ಕೃತಿಕ, ಸಂಗೀತ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವಂತಹ, ಪ್ರತಿ ಕ್ಷೇತ್ರದಲ್ಲಿ ಇಬ್ಬರು ಮಕ್ಕಳಂತೆ 8 ಮಕ್ಕಳನ್ನು ಪ್ರಶಸ್ತಿಗೆ ಆಯ್ಕೆ ಮಾಡಲಾಯಿತು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್ ಬಣಕಾರ್, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಕೆ. ರವಿಶಂಕರ್ ರೆಡ್ಡಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಸ್.ಕೆ.ಮಲ್ಲಿಕಾರ್ಜುನ್, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಸುಚೇತಾ ನೆಲವಗಿ, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಸವಿತಾ, ಪಿವಿಎಸ್ ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಅಧ್ಯಕ್ಷ ಡಾ.ಪಿ.ವಿ.ಶ್ರೀಧರಮೂರ್ತಿ, ದರ್ಶನ್ ಸಂಸ್ಥೆ ಅಧ್ಯಕ್ಷೆ ಲಲಿತಾ ಕೃಷ್ಣಮೂರ್ತಿ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net