

ಚಿಕ್ಕಮಗಳೂರು: ಕಾಫಿ ನಾಡಿನ ಅರಳಗುಪ್ಪೆ ಶ್ರೀ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಯಲ್ಲಿ ಹೃದ್ರೋಗ ತಜ್ಞರು ಇಲ್ಲದೆ ಜನ ಪರಿತಪಿಸುವಂತಾಗಿದೆ. ಹೀಗಾಗಿ ಹೃದಯ ಸಂಬAಧಿ ರೋಗಗಳಿಗೆ ಚಿಕಿತ್ಸೆ ಪಡೆಯಲು ಜನ ಬೇರೆ ಜಿಲ್ಲೆಗಳಿಗೆ ತೆರಳಬೇಕಾದ ಅನಿವಾರ್ಯತೆ ಎದುರಾಗಿದೆ.
ಹೌದು. ಜಿಲ್ಲಾಸ್ಪತ್ರೆಯಲ್ಲಿ ಮಾತ್ರ ಹೃದ್ರೋಗ ತಜ್ಞರ ಹುದ್ದೆ ಇದೆ. ಆದರೆ ಹೃದ್ರೋಗ ತಜ್ಞರು ಕಳೆದ ಎಂಟು ತಿಂಗಳಿನಿAದ ಕರ್ತವ್ಯಕ್ಕೆ ಹಾಜರಾಗದೆ ಗೈರಾಗಿದ್ದಾರೆ. ಹೀಗಾಗಿ ಜನ ಎದೆ ನೋವು ಸೇರಿದಂತೆ ಹೃದಯಕ್ಕೆ ಸಂಬAಧಿಸಿದ ಯಾವುದೇ ಸಮಸ್ಯೆ ಇದ್ದರೂ ಶಿವಮೊಗ್ಗ, ಉಡುಪಿ, ಮಂಗಳೂರು ಅಥವಾ ಹಾಸನ ಜಿಲ್ಲೆಗಳ ಆಸ್ಪತ್ರೆಗೆ ಹೋಗಬೇಕಾದ ಅನಿವಾರ್ಯತೆ ಇದೆ.
ಚಿಕ್ಕಮಗಳೂರು ನಗರದ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ಇಬ್ಬರು ಹೃದ್ರೋಗ ತಜ್ಞರಿದ್ದಾರೆ. ಆದರೆ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಇಲ್ಲದಿರುವ ಕಾರಣದಿಂದಾಗಿ ಬಡವರು, ಕೂಲಿ ಕಾರ್ಮಿಕರು ಅನಿವಾರ್ಯವಾಗಿ ಖಾಸಗಿ ಆಸ್ಪತ್ರೆಗಳಿಗೆ ಇಲ್ಲವೇ ಬೇರೆ ಜಿಲ್ಲೆಗಳ ಆಸ್ಪತ್ರೆಗಳಿಗೆ ಹೋಗಬೇಕಾಗಿದೆ. ಸರ್ಕಾರಿ ತಾಲೂಕು ಆಸ್ಪತ್ರೆಗಳಲ್ಲಿ ಹೃದ್ರೋಗ ತಜ್ಞರ ನೇಮಕಕ್ಕೆ ಅವಕಾಶವಿಲ್ಲ. ಹೀಗಾಗಿ ಜಿಲ್ಲೆಯ ಎಲ್ಲ ತಾಲೂಕುಗಳ ಜನ ಹೃದಯಕ್ಕೆ ಸಂಬAಧಿಸಿದ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಯನ್ನೇ ಅವಲಂಭಿಸಿದ್ದರು. ಆದರೆ ಕಳೆದ ಎಂಟು ತಿಂಗಳಿನಿAದ ಹೃದ್ರೋಗ ತಜ್ಞರು ಗೈರು ಹಾಜರಾಗಿರುವುದರಿಂದಾಗಿ ಜನರಿಗೆ ತೊಂದರೆ ಎದುರಾಗಿದೆ. ತುರ್ತು ಪರಿಸ್ಥಿತಿಯಲ್ಲೂ ಬೇರೆ ಜಿಲ್ಲೆಗಳಿಗೆ ತೆರಳಬೇಕಾದ ಸ್ಥಿತಿ ನಿರ್ಮಾಣವಾಗಿದೆ.
ನೇಮಕದ ನಿರೀಕ್ಷೆ
ಜಿಲ್ಲಾಸ್ಪತ್ರೆಗೆ ಹೃದ್ರೋಗ ತಜ್ಞರ ನೇಮಕ ತುರ್ತು ಅಗತ್ಯವಾಗಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಜನಪ್ರತಿನಿಧಿಗಳು ವೈದ್ಯರ ನೇಮಕದ ಬಗ್ಗೆ ಗಮನಹರಿಸಬೇಕು ಎಂಬುದು ಸಾರ್ವಜನಿಕರ ಒತ್ತಾಯವಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಡಿಎಚ್‌ಒ ಡಾ. ಅಶ್ವತ್ ಬಾಬು, ಹೃದ್ರೋಗ ತಜ್ಞರ ನೇಮಕವಾಗುವ ನಿರೀಕ್ಷೆಯಿದೆ. ಕೌನ್ಸಲಿಂಗ್ ನಡೆಯುತ್ತಿದೆ. ಹೀಗಾಗಿ ಕೆಲವೇ ತಿಂಗಳಲ್ಲಿ ವೈದ್ಯರ ನೇಮಕವಾಗುವ ಸಾಧ್ಯತೆಯಿದೆ. ಅಲ್ಲಿಯವರೆಗೆ ಜನರಿಗೆ ತೊಂದರೆಯಾಗದAತೆ ಎಂಡಿ ಜನರಲ್ ಫಿಜಿಷಿಯನ್ ವೈದ್ಯರೇ ಚಿಕಿತ್ಸೆ ನೀಡುತ್ತಿದ್ದಾರೆ. ಹೆಚ್ಚಿನ ಚಿಕಿತ್ಸೆ ಅಗತ್ಯವಿರುವ ರೋಗಿಗಳಿಗೆ ಸಂಬAಧಿಸಿದ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತಿದೆ ಎಂದರು.
ಔಷಧಗಳಿಗೆ ಇಲ್ಲ ಕೊರತೆ
ಹೃದ್ರೋಗ ಚಿಕಿತ್ಸೆಗೆ ಸಂಬAಧಿಸಿದ ಔಷಧಗಳಿಗೆ ಕಾಫಿನಾಡಿನಲ್ಲಿ ಯಾವುದೇ ಕೊರತೆ ಇಲ್ಲ. ಎಲ್ಲ ತಾಲೂಕು ಆಸ್ಪತ್ರೆಗಳಿಗೂ ಔಷಧ ಪೂರೈಕೆ ಮಾಡಲಾಗಿದೆ ಎಂದು ಡಿಎಚ್‌ಒ ಡಾ.ಅಶ್ವತ್ ಬಾಬು ತಿಳಿಸಿದ್ದಾರೆ.
ಜಿಲ್ಲಾಸ್ಪತ್ರೆ ಸೇರಿದಂತೆ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿರುವ ಎಂಡಿ ಜನರಲ್ ಫಿಜಿಷಿಯನ್ ವೈದ್ಯರು ಹೃದಯ ಸಮಸ್ಯೆಗೆ ಸಂಬAಧಿಸಿದAತೆ ಚಿಕಿತ್ಸೆ ನೀಡುತ್ತಿದ್ದಾರೆ. ಚಿಕಿತ್ಸೆ ನೀಡಲು ಯಾವುದೇ ತೊಂದರೆಯಾಗದAತೆ ಅಗತ್ಯ ಔಷಧ ಸರಬರಾಜು ಮಾಡುತ್ತಿz್ದೆÃವೆ. ಜಿಲ್ಲಾಸ್ಪತ್ರೆಗೆ ವೈದ್ಯರ ನೇಮಕವಾದ ಬಳಿಕ ಜನರಿಗೆ ಇನ್ನಷ್ಟು ಅನುಕೂಲವಾಗಲಿದೆ ಎಂದು ಮಾಹಿತಿ ನೀಡಿದರು.
ಸೆಕ್ಯುರಿಟಿ ಗಾರ್ಡ್ ಸಾವು
ಹೃದಯಾಘಾತದಿಂದಾಗಿ ಕರ್ತವ್ಯ ನಿರ್ವಹಿಸುತ್ತಿರುವಾಗಲೇ ಸೆಕ್ಯೂರಿಟಿ ಗಾರ್ಡ್ ಓರ್ವರು ಮೃತಪಟ್ಟಿರುವ ಘಟನೆ ಚಿಕ್ಕಮಗಳೂರಿನ ಬೈಕ್ ಶೋರೂಮ್ ಒಂದರಲ್ಲಿ ನಡೆದಿದೆ.
ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮದ ಶಿವಮೂರ್ತಿ(೫೦) ಮೃತಪಟ್ಟ ಸೆಕ್ಯೂರಿಟಿ ಗಾರ್ಡ್. ನಗರದ ಬೇಲೂರು ರಸ್ತೆಯ ಶೋರೂಮ್ ಒಂದರಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇವರು ಕೆಲಸದ ವೇಳೆಯೇ ಹೃದಯಾಘಾತದಿಂದ ಕುಸಿತು ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಆದರೂ ಅಷ್ಟರಲ್ಲಾಗಲೇ ಅವರು ಸಾವನ್ನಪ್ಪಿದ್ದರು.
ಹೃದಯ ಸಂಬAಧಿ ಸಮಸ್ಯೆಗಳ ಬಗ್ಗೆ ಜನ ನಿರ್ಲಕ್ಷ ವಹಿಸಬಾರದು. ಎದೆ ನೋವು ಸೇರಿದಂತೆ ಹೃದಯಾಘಾತದ ಲಕ್ಷಣಗಳು ಕಂಡುಬAದಾಕ್ಷಣ ಕೂಡಲೇ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯಬೇಕು. ಇಲ್ಲದಿದ್ದಲ್ಲಿ ಪ್ರಾಣಾಪಾಯದ ಸಂಭವವಿರುತ್ತದೆ. ಜಿಲ್ಲಾಸ್ಪತ್ರೆಗೆ ಹೃದ್ರೋಗ ತಜ್ಞರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ ತಾಲೂಕು ಆಸ್ಪತ್ರೆಗಳಲ್ಲಿಯೂ ಸ್ಥಳೀಯವಾಗಿ ಚಿಕಿತ್ಸೆ ನೀಡುವ ಕೆಲಸವಾಗುತ್ತಿದೆ.
ಡಾ.ಅಶ್ವತ್ ಬಾಬು, ಡಿಎಚ್‌ಒ ಚಿಕ್ಕಮಗಳೂರು.