ಜಿಲ್ಲೆಗೆ ಕಂದಾಯ ಸಚಿವ ಭೇಟಿ

Published on

ಬಳ್ಳಾರಿ : ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಆ.14 ಮತ್ತು 15 ರಂದು ಜಿಲ್ಲೆಗೆ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ಸಚಿವರ ಅಪ್ತ ಕಾರ್ಯದರ್ಶಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆ.14 ರಂದು ಸಂಜೆ 06.30 ಗಂಟೆಗೆ ಬೆಂಗಳೂರಿನಿಂದ ರಸ್ತೆ ಮೂಲಕ ಹೊರಟು, ರಾತ್ರಿ 10 ಗಂಟೆಗೆ ನಗರಕ್ಕೆ ಆಗಮಿಸಿ, ವಾಸ್ತವ್ಯ ಮಾಡುವರು. ಆ.15 ರಂದು ಬೆಳಿಗ್ಗೆ 09 ಗಂಟೆಗೆ ನಗರದ ವಿಮ್ಸ್ ಮೈದಾನದಲ್ಲಿ ಆಯೋಜಿಸಿರುವ 78 ನೇ ಸ್ವಾತಂತ್ರೋತ್ಸವ ದಿನಾಚರಣೆ ಪ್ರಯುಕ್ತ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಬಳಿಕ ಮಧ್ಯಾಹ್ನ 01.30 ಗಂಟೆಗೆ ಬಳ್ಳಾರಿಯಿಂದ ರಸ್ತೆ ಮೂಲಕ ಬೆಂಗಳೂರಿಗೆ ಹೊರಡುವರು

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net