ಜಿಲ್ಲೆಗೆ ಕಳೆದ 9 ತಿಂಗಳಲ್ಲಿ ನಾಲ್ಕು ಬಾರಿ ಸಿದ್ದರಾಮಯ್ಯ ಭೇಟಿ ಇತಿಹಾಸ

K.N. Rajanna
Published on

ಹಾಸನ : ಜಿಲ್ಲೆಗೆ ಕಳೆದ 9 ತಿಂಗಳಲ್ಲಿ ನಾಲ್ಕು ಬಾರಿ ಯಾರಾದರೂ ಮುಖ್ಯಮಂತ್ರಿ ಭೇಟಿ ನೀಡಿದ್ದಾರೆ ಅದು ಸಿದ್ದರಾಮಯ್ಯ, ಇದು ಜಿಲ್ಲೆಯಲ್ಲಿ ಇತಿಹಾಸದ ಪುಟ್ಟದಲ್ಲಿ ದಾಖಲೆಯಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್. ರಾಜಣ್ಣ ಹೇಳಿದರು.
ನಗರದಲ್ಲಿ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದ ಅವರು. ಜಿಲ್ಲೆ ಬಗ್ಗೆ ಮುಖ್ಯಮಂತ್ರಿಗಳಿಗೆ ವಿಶೇಷ ಕಾಳಜಿ ಇದೆ. ಮುಂದಿನ ದಿನಗಳಲ್ಲಿ ಹಾಸನ ನಗರಸಭೆಯನ್ನು ಮಹಾನಗರ ಪಾಲಿಕೆ ಮಾಡುವವರ ಜೊತೆಗೆ ಜಿಲ್ಲೆಯ ಸರ್ವತೋಮುಖ ಅಭಿವೃದ್ಧಿಗೆ ಸಹಕಾರ ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯ ಮತ್ತು ಜಿಲ್ಲೆಯಲ್ಲಿ ನಮ್ಮ ಐದು ಗ್ಯಾರಂಟಿಗಳು ಉತ್ತಮವಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ದಕ್ಷತೆಯಿಂದ ಕೆಲಸ ಮಾಡಿದ್ದರ ಪರಿಣಾಮ ಈಗ ಜಿಲ್ಲೆಯಲ್ಲಿ ಶೇಕಡ 98ರಷ್ಟು ಸಾಧನೆ ಮಾಡಲು ಸಾಧ್ಯವಾಗಿದೆ. ಇದು ಅವರ ಕೆಲಸಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಅಧಿಕಾರಿ ವರ್ಗದವರನ್ನು ಮೆಚ್ಚುಗೆ ವ್ಯಕ್ತಪಡಿಸಿದರು.
ಹಸಿವು ಮುಕ್ತ ರಾಜ್ಯ ಮಾಡುವ ಸಂಕಲ್ಪದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಡವರ್ಗದವರು, ರೈತರು, ಮಹಿಳೆಯರು, ಯುವಕರಿಗೆ ವಿಶೇಷ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ ಇದರ ಸದುಪಯೋಗವನ್ನ ಜಿಲ್ಲೆ ಮತ್ತು ರಾಜ್ಯದ ಜನರು ಪಡೆದುಕೊಂಡಿದ್ದಾರೆ ಆದರೂ ಕೂಡ ವಿರೋಧ ಪಕ್ಷದವರು ಟೀಕೆ ಮಾಡುತ್ತಿದ್ದಾರೆ ಎಂದು ಟಾಂಗ್ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net