

ಚಿಕ್ಕಬಳ್ಳಾಪುರ : ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜಿಲ್ಲೆಯ 5 ಕಡೆಗಳಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.
ರಾಗಿ ಖರೀದಿ ಕೇಂದ್ರಗಳನ್ನು ಸ್ಥಾಪಿನೆ ಸಂಬಂಧ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಿಲ್ಲಾ ಟಾಸ್ಕ್ ೆರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿ, ಈಗಾಗಲೇ ಸ್ಥಾಪಿಸಲಾಗಿರುವ ಕೇಂದ್ರಗಳಲ್ಲಿ ಡಿ.15ರಿಂದ ರಾಗಿ ಖರೀದಿಸಲಾಗುತ್ತದೆ. ಡಿ.11 ರಿಂದಲೇ ನೋಂದಣಿ ಆರಂಭವಾಗಿದ್ದು, 2021ರ ಜ.31ರವರೆಗೂ ನೋಂದಣಿ ಪ್ರಕ್ರಿಯೆ ನಡೆಯಲಿದೆ ಎಂದು ವಿವರಿಸಿದರು.
ರೈತರು ಆಧಾರ್ ಕಾರ್ಡ್ ಅಥವಾ ್ರ್ೂ ಐಡಿ ನೀಡಿ ಕೇಂದ್ರಗಳಲ್ಲಿ ಹೆಸರು ನೋಂದಾಯಿಸಿಕೊಳ್ಳಬಹುದು. ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಸರ್ಕಾರ ಪ್ರತಿ 1 ಕ್ವಿಂಟಾಲ್‌ಗೆ 3,295 ರೂ ಬೆಂಬಲ ಬೆಲೆ ನಿಗದಿ ಮಾಡಿದ್ದು, 1.10 ಕ್ವಿಂಟಾಲ್‌ನಂತೆ ಒಬ್ಬ ರೈತರಿಂದ ಗರಿಷ್ಠ 50 ಕ್ವಿಂಟಾಲ್ ವರೆಗೂ ಖರೀದಿಸಲಾಗುತ್ತದೆ, ನೋಂದಾಯಿತ ರೈತರು ಮಾ.15ರವರೆಗೆ ರಾಗಿ ಮಾರಬಹುದು ಎಂಬ ಮಾಹಿತಿ ನೀಡಿದರು.
ಜಿಲ್ಲೆಯಲ್ಲಿ ಈಗಾಗಲೇ ಗ್ರೇಡರ್‌ಗಳನ್ನು ನೇಮಿಸಿ, ತರಬೇತಿ ನೀಡಲಾಗಿದೆ. ಖರೀದಿ ಕೇಂದ್ರಗಳ ಕಾರ್ಯ ನಿರ್ವಹಣೆಯ ಬಗ್ಗೆ ಕೃಷಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಹೆಚ್ಚಿನ ಪ್ರಚಾರ ಕೈಗೊಳ್ಳಬೇಕು. ರೈತ ಸಂಪರ್ಕ ಕೇಂದ್ರ, ಗ್ರಾಪಂ, ಎಪಿಎಂಸಿ ಮಾರುಕಟ್ಟೆಗಳಲ್ಲಿ ಸೇರಿ ಎಲ್ಲ ಗ್ರಾಮಗಳಲ್ಲಿ ಬೆಂಬಲ ಬೆಲೆಯ ಬಗೆಗಿನ ಭಿತ್ತಿಪತ್ರಗಳನ್ನು ಪ್ರಚುರ ಪಡಿಸುವಂತೆ ಡಿಸಿ ಸೂಚಿಸಿದರು.
ಎಲ್ಲೆಲ್ಲಿ ರಾಗಿ ಖರೀದಿ ಕೇಂದ್ರ : ಗೌರಿಬಿದನೂರಿನ ಎಪಿಎಂಸಿ ಮಾರುಕಟ್ಟೆ ಆವರಣ, ಚಿಂತಾಮಣಿ ತಾಲೂಕಿನ ಕಾಗತಿ ರಸ್ತೆಯಲ್ಲಿರುವ ಕೆಎ್ಸಿಎಸ್ ಗೋದಾಮು, ಚಿಕ್ಕಬಳ್ಳಾುರ ತಾಲೂಕಿನ ವರದಹಳ್ಳಿ ಸಮೀಪದ ಕೆಎ್ಸಿಎಸ್ ಗೋದಾಮು, ಬಾಗೇಪಲ್ಲಿಯ ಎಪಿಎಂಸಿ ಮಾರುಕಟ್ಟೆ ಆವರಣದಲ್ಲಿ ರಾಗಿ ಖರೀದಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ.